More

    ಮಾರಾಟದ ಸರಕಾದ ಶಿಕ್ಷಣ

    ಹೊಳಲ್ಕೆರೆ: ಇಂದು ಶಿಕ್ಷಣ ಮಾರಾಟದ ಸರಕಾಗಿದೆ. ಆರ್ಥಿಕ, ಸಾಮಾಜಿಕ ಮೌಲ್ಯ ಎತ್ತಿ ಹಿಡಿಯುವಲ್ಲಿ ಶಿಕ್ಷಣ ವಿಫಲವಾಗಿದೆ ಎಂದು ಸಾಹಿತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್.ಟಿ. ಶಾಂತಗಂಗಾಧರ್ ಹೇಳಿದರು.

    ಇಲ್ಲಿನ ಸರ್ಕಾರಿ ಪದವಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಚಿತ್ರದುರ್ಗ ನೆಹರು ಯುವಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದಿಂದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಶಿಸ್ತು, ಸಂಯಮ, ಶಾಂತಿ, ನೆಮ್ಮದಿ ನೆಲೆಸಿಲ್ಲ. ಸಂಸ್ಕೃತಿ, ಸಂಪ್ರದಾಯದ ಬಗೆಗಿನ ಅರಿವು ದೂರಾಗುತ್ತಿದೆ ಎಂದರು.

    ಸರ್ಕಾರಿ ಕಚೇರಿಗಳಲ್ಲಿ ಲಂಚ ನೀಡದಿದ್ದರೆ ಕೆಲಸ ಆಗುವುದಿಲ್ಲ. ಭ್ರಷ್ಟಾಚಾರ ಎಂಬ ಪೆಡಂಭೂತವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಇದೆ ಎಂದರು.

    ಜಾನಪದ ಅಕಾಡೆಮಿ ಸದಸ್ಯ ಕಾಲ್ಕೆರೆ ಚಂದ್ರಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರು ಯುವಕರಿಗೆ ಸ್ಫೂರ್ತಿ ನೀಡಿದ್ದಾರೆ. ಜಿಲ್ಲೆ, ತಾಲೂಕಿನಲ್ಲಿರುವ ಕಲಾವಿದರನ್ನು ಗುರುತಿಸಿ ಅವರಿಗೆ ಮಾಸಾಶನ ಮಂಜೂರು ಮಾಡಿಸುವ ಕೆಲಸ ಮಾಡಲಾಗಿದೆ ಎಂದರು.

    ಪ್ರಾಚಾರ್ಯ ಎಸ್.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ತಂದೆ, ತಾಯಿ, ಗುರು, ಹಿರಿಯರಿಗೆ ಗೌರವ ನೀಡಬೇಕು ಎಂದು ಹೇಳಿದರು.

    ಪತ್ರಕರ್ತ ಕೆ.ಬಿ.ಬಸವರಾಜಯ್ಯ ಮಾತನಾಡಿದರು. ಶಿಕ್ಷಣ ನಿವೃತ್ತ ಸಂಯೋಜಕ ಡಿ.ಗೋವಿಂದಪ್ಪ, ನಿವೃತ್ತ ಪ್ರಾಚಾರ್ಯ ತಿಪ್ಪೇಸ್ವಾಮಿ, ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಷಡಾಕ್ಷರಪ್ಪ, ಸಾಹಿತಿ ಟಿ.ಶಂಕರಮೂರ್ತಿ, ಪ್ರೊ.ಅಶ್ವತ್ ಯಾದವ್, ಪ್ರೊ.ಮಾದಪ್ಪ ನಾಯ್ಕ, ಪ್ರೊ. ಕರಿಸಿದ್ದಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts