More

    ಸಿಎಂ ನಿಧಿಗೆ 50 ಲಕ್ಷ ರೂ. ದೇಣಿಗೆ

    ಹೊಳಲ್ಕೆರೆ: ಲಾಕ್‌ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ನಿಧಿಗೆ ವೈಯಕ್ತಿಕವಾಗಿ 50 ಲಕ್ಷ ರೂ. ನೀಡಿದ್ದೇನೆಂದು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ 50 ಲಕ್ಷ ರೂ. ಮೌಲ್ಯದ ಚೆಕ್ ನೀಡಿ ಮಾತನಾಡಿದರು.

    ಕರೊನಾ ಸೋಂಕಿಗೆ ಜಗತ್ತು ತತ್ತರಿಸಿದೆ. ಪ್ರಧಾನಿ ಮೋದಿ ದೇಶವನ್ನು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯವನ್ನು ಲಾಕ್‌ಡೌನ್ ಮಾಡುವ ಮೂಲಕ ಜನರ ರಕ್ಷಣೆಗೆ ಕ್ರಮಕೈಗೊಂಡಿದ್ದಾರೆ. ಜತೆಗೆ ವಿವಿಧ ವರ್ಗದ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ.

    ಅವರ ಆಡಳಿತದಲ್ಲಿ ಆರ್ಥಿಕ ಸಂಕಷ್ಟ ಸೃಷ್ಟಿಯಾಗದಂತೆ ನೋಡಿಕೊಳ್ಳುವುದು ಶಾಸಕನಾದ ನನ್ನ ಕರ್ತವ್ಯ. ಹಾಗಾಗಿ ನಮ್ಮ ಕೈಲಾದಷ್ಟು ಆರ್ಥಿಕ ಸಹಕಾರ ನೀಡುತ್ತಿದ್ದೇವೆ ಎಂದರು.

    ಕಳೆದ ವರ್ಷ ರಾಜ್ಯದಲ್ಲಿ ಸೃಷ್ಟಿಯಾಗಿದ್ದ ನೆರೆ ಹಾವಳಿಗೆ ಸಿಕ್ಕಿಕೊಂಡಿರುವವರನ್ನು ರಕ್ಷಣೆ ಮಾಡುವ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ 1.42 ಕೋಟಿ ರೂ. ನೀಡಿದ್ದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಧನ ಸಹಾಯ ನೀಡಲು ಬದ್ಧನಾಗಿದ್ದೇನೆ ಎಂದು ತಿಳಿಸಿದರು.

    ಜನಪ್ರತಿನಿಧಿಯಾಗಿ ದೇಶಕ್ಕಾಗಿ ನಾನು ಎನ್ನುವ ಮೂಲಕ ಬದುಕು ಕಟ್ಟಿಕೊಳ್ಳಬೇಕಾಗಿದೆ. ದೇಶ, ರಾಜ್ಯ ಜನರಿದ್ದಲ್ಲಿ ಮಾತ್ರ ಜನಪ್ರತಿನಿಧಿ ಎನ್ನುವ ಸತ್ಯವನ್ನು ನಾವು ಅರಿತುಕೊಳ್ಳಬೇಕು. ಜತೆಗೆ ಶ್ರೀಮಂತರು ಬಡವರಿಗೆ ಸಹಕಾರ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

    ಸಚಿವರಾದ ಬಿ.ಶ್ರೀರಾಮಲು, ಜಗದೀಶ್ ಶೆಟ್ಟರ್, ದೇವರಾಜ ಅರಸು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಸಿ.ರಘುಚಂದನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts