ಹೊಳಲ್ಕೆರೆ: ತಾಲೂಕಿನ ಚಿತ್ರಹಳ್ಳಿ ಗ್ರಾಮದ ಶ್ರೀ ಚಿತ್ರಲಿಂಗೇಶ್ವರಸ್ವಾಮಿ ದೇವಸ್ಥಾನದ ಹುಂಡಿಯಲ್ಲಿನ ಹಣವನ್ನು ಗುರುವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಎಣಿಕೆ ಮಾಡಲಾಯಿತು.
ಒಟ್ಟು 9,28,175 ರೂ. ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಉಪ ತಹಸೀಲ್ದಾರ್ ಮತ್ತು ರಾಜಸ್ವ ನಿರೀಕ್ಷಕರು, ಮುಜರಾಯಿ ಗುಮಾಸ್ತರು, ಗ್ರಾಮಾಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ದೇವಸ್ಥಾನ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ.