ಶಾಲಾವರಣದಲ್ಲಿ ಸ್ವಚ್ಛತೆ ಕಾಪಾಡಬೇಕು

ಹೊಳಲ್ಕೆರೆ: ಪ್ರಸ್ತುತ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಸ್ವಚ್ಛತೆ, ಸಣ್ಣಪುಟ್ಟ ದುರಸ್ತಿ ಹಾಗೂ ದಾಖಲಾತಿ ಬಗ್ಗೆ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಗಮನಹರಿಸಬೇಕು ಎಂದು ಮುಖ್ಯ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಟಿ.ವರದರಾಜ್ ತಿಳಿಸಿದರು.

ತಾಲೂಕಿನ ಆವಿನಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಗುಂಡೇರಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗುವ ಮೂಲಕ ಅಕ್ಷರ ಜಾತ್ರೆಯಲ್ಲಿ ಪಾಲುಗೊಳ್ಳಬೇಕು ಎಂದರು.

ಮಿಂಚಿನ ಸಂಚಾರ, ಶೈಕ್ಷಣಿಕ ಸಿದ್ಧತೆ, ಸೇತುಬಂಧ ದಾಖಲೆ ತಯಾರಿಸಬೇಕು, ಪಠ್ಯ ಪುಸ್ತಕ, ಸಮವಸ್ತ್ರ ಸಕಾಲಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಶಾಲಾ ಅವಧಿಯಲ್ಲಿ ಮೊಬೈಲ್ ನಿಷೇಧಿ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ಸಿಆರ್‌ಪಿ ಕಾಂತರಾಜ್, ಮುಖ್ಯ ಶಿಕ್ಷಕ ರುದ್ರಸ್ವಾಮಿ, ಎಸ್‌ಡಿಎಂಸಿ ಪ್ರತಿನಿಧಿಗಳು ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *