blank

ಮಣಿಪುರ ಘಟನೆ ಖಂಡಿಸಿ ಬೀದಿಗಿಳಿದ ಡಿಎಸ್‌ಎಸ್

blank

ಹೊಳಲ್ಕೆರೆ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಿಂದ ತಹಸೀಲ್ದಾರ್ ಕಚೇರಿವರೆಗೆ ಅರಬೆತ್ತಲೆ ಪ್ರತಿಭಟನೆ ನಡೆಸಿದರು.

ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ಮಾತನಾಡಿ, ಮಣಿಪುರದ ಗ್ರಾಮವೊಂದರಲ್ಲಿ ಮೇ 4 ರಂದು ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ.

ಇಷ್ಟೇ ಅಲ್ಲದೆ ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದರು.

ಮೇ 18 ರಂದು ಸಂತ್ರಸ್ತ ಮಹಿಳೆಯರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದು 71 ದಿನ ಕಳೆದರೂ ಯಾರೊಬ್ಬರನ್ನೂ ಬಂಧಿಸಿಲ್ಲ.

ಇಂತಹ ಅಮಾನವೀಯ ಘಟನೆಯ ದೃಶ್ಯ ನೋಡಿದಾಗ ನಾವು ಭಾರತದಲ್ಲಿದ್ದೇವೋ, ಹಿಟ್ಲರ್‌ನ ಆಡಳಿತದಲ್ಲಿದ್ದೇವೋ ಎನಿಸುತ್ತಿದೆ ಎಂದು ತಿಳಿಸಿದರು.

ಇಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ.

ಹೀಗಾಗಿ ಕೃತ್ಯಕ್ಕೆ ಸಂಬಂಧಪಟ್ಟವರನ್ನು ಬಂಧಿಸಿ ಕೂಡಲೇ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿದರು.

ಬಳಿಕ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ.ಆರ್.ಸುಂದರಮೂರ್ತಿ, ನವೀನ್ ಮದ್ದೇರು, ಪ್ರಭಾಕರ್, ಶ್ರೀನಿವಾಸ್ ಇತರರಿದ್ದರು.

Share This Article

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…

ಬ್ರೆಡ್​​ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್​; ಇಲ್ಲಿದೆ ಸಿಂಪಲ್​ ವಿಧಾನ | Recipe

ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…

ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe

ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…