ಉದ್ದಿಮೆ ಪರವಾನಗಿ ಕಡ್ಡಾಯ

ಹೊಳಲ್ಕೆರೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉದ್ದಿಮೆದಾರರು ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಪಪಂ ಪ್ರಭಾರ ಮುಖ್ಯಾಧಿಕಾರಿ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಪಪಂ ಸಿಬ್ಬಂದಿ ಜತೆಗೆ ಶನಿವಾರ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಸೂಚಿಸಿದರು.

ಪಪಂ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ವ್ಯಾಪಾರ, ಉದ್ಯಮಿಗಳು, ವಾಣಿಜ್ಯ ಪರವಾನಗಿ ಪಡೆಯಬೇಕು. ಪರವಾನಗಿ ಪಡೆಯದ ಉದ್ಯಮದ ಮಾಲೀಕರಿಗೆ ನೊಟೀಸ್ ನೀಡಿ, 15 ದಿನ ಅವಕಾಶ ಕೊಟ್ಟಿದ್ದೇವೆ ಎಂದರು.

ಪಪಂ ಮಳಿಗೆ ಬಾಡಿಗೆ ಪಾವತಿಸದಿರುವವರ ಠೇವಣಿ ಮುಟ್ಟುಗೋಲು ಹಾಕಿಕೊಂಡು, ಕಾನೂನುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಪಪಂ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ಮುಕ್ತಗೊಳಿಸುವ ಗುರಿ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಬಳಸಿ ಬಿಸಾಡುವ ಪ್ಲಾಸ್ಟಿಕ್ ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ವರ್ತಕರು ಸಹಕರಿಸಬೇಕು ಎಂದರು.

Leave a Reply

Your email address will not be published. Required fields are marked *