ಹೊಳಲ್ಕೆರೆಯಲ್ಲಿ ತಹಸೀಲ್ದಾರ್‌ಗೆ ಮನವಿ

ಹೊಳಲ್ಕೆರೆ: ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಗುರುವಾರ ತಾಲೂಕಿನ ವಾಲ್ಮೀಕಿ ಸಮಾಜದವರು ತಹಸೀಲ್ದಾರ್ ಕೆ.ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಸಮಾಜದ ಅಧ್ಯಕ್ಷ ಸೂರೇಗೌಡ ಮಾತನಾಡಿ, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ನಾಯಕರ ಪ್ರಮಾಣ 6.95ರಷ್ಟಿದೆ. ಇದಕ್ಕೆ ಅನುಗುಣವಾಗಿ ನೇಮಕಾತಿ ಮತ್ತು ಶೈಕ್ಷಣಿಕ ಉದ್ದೇಶಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

50 ಬುಡಕಟ್ಟು ಗುಂಪುಗಳನ್ನು ಪರಿಶಿಷ್ಟ ವರ್ಗಗಳೆಂದು ಅಧಿಸೂಚಿಸಲಾಗಿದೆ. ಇದರಿಂದ ಸಮುದಾಯದ ಪ್ರಗತಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತ್ಯೇಕ ಪರಿಶಿಷ್ಟ ವರ್ಗದ ಸಚಿವಾಲಯ ತೆರೆದು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಾಲ್ಮೀಕಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಹನುಮಂತಪ್ಪ, ಮುಖಂಡರಾದ ಶಿವಕುಮಾರ್, ಎಸ್.ಜೆ.ರಂಗಸ್ವಾಮಿ, ಚಂದ್ರಪ್ಪ, ತಿಮ್ಮಪ್ಪ, ಪ್ರಭು ಇತರರಿದ್ದರು.

Leave a Reply

Your email address will not be published. Required fields are marked *