More

    15ರಿಂದ ಹೊಳೆಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    ಸೊರಬ: ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರವಾದ ಬಂಕಸಾಣದ ಶ್ರೀ ಹೊಳೆಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಜ.15ರಿಂದ ಆರಂಭವಾಗಿ ಒಂದು ತಿಂಗಳ ಕಾಲ ನಡೆಯಲಿದೆ.

    15ರಂದು ಬೆಳಗ್ಗೆ ನಾಗಚೌಡೇಶ್ವರಿ ದೇವಿಗೆ ಉಡಿ ತುಂಬುವುದು, ಮಧ್ಯಾಹ್ನ ಉತ್ಸವ ಮೂರ್ತಿ ಸ್ಥಾಪನೆ ನಡೆಯಲಿದೆ. ಮಕರ ಸಂಕ್ರಮಣದ ಉತ್ತರಾಯಣ ಪುಣ್ಯಕಾಲ ಇರುವುದರಿಂದ ನದಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಲಿದ್ದಾರೆ. ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಲಿದೆ. ಗಣ್ಯರಿಂದ ಧ್ವಜಾರೋಹಣ ನಡೆಯಲಿದೆ. ಲಿಂಗಪೂಜೆ ಮತ್ತು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
    16ರ ಬೆಳಗ್ಗೆ 11ಕ್ಕೆ ಶ್ರೀ ಹೊಳೆಲಿಂಗೇಶ್ವರ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ. ಕಣಕುಪ್ಪೆ ಗವಿಮಠದ ನಾಲ್ವಡಿ ಶಿವಾಚಾರ್ಯ ಸ್ವಾಮೀಜಿ, ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಜಡೆ ಸಂಸ್ಥಾನ ಮಠದ ಡಾ. ಶ್ರೀ ಮಹಾಂತ ಸ್ವಾಮೀಜಿ, ಲಕ್ಕವಳ್ಳಿ ಮೋಕ್ಷಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ, ತಡಗಣಿಯ ರವೀಂದ್ರ ಗುರೂಜಿ ಅವರ ಸಾನ್ನಿಧ್ಯದಲ್ಲಿ ಸಚಿವ ಮಧುಬಂಗಾರಪ್ಪ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
    26ರಂದು ಜಂಗಿ ಕುಸ್ತಿ ಸ್ಪರ್ಧೆ, ಫೆ.6ರಂದು ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಸೇರಿದಂತೆ ಒಂದು ತಿಂಗಳು ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.

    ಉತ್ತರಾಭಿಮುಖಿ
    ಸಾಮಾನ್ಯವಾಗಿ ದೇಶಾದ್ಯಂತ ಪೂರ್ವ ಅಥವಾ ಪಶ್ಚಿಮಾಭಿಮುಖವಾಗಿ ನದಿಗಳು ಹರಿಯುತ್ತಿವೆ. ಬಂಕಸಾಣದಲ್ಲಿ ವರದಾ-ದಂಡಾವತಿ ಸಂಗಮದ ನಂತರ ಉತ್ತರಾಭಿಮುಖವಾಗಿ ನದಿ ಹರಿಯುವುದು ವಿಶೇಷ. ಇದರಿಂದಾಗಿ ಉತ್ತರ ಪುಣ್ಯಕಾಲದಲ್ಲಿ ಮಕರ ಸಂಕ್ರಮಣದಂದು ಪುಣ್ಯಸ್ನಾನ ಮಾಡಿ, ಪೂಜೆ ಸಲ್ಲಿಸಿದರೆ ಪುಣ್ಯ ಸಿಗುತ್ತದೆ ಎಂಬುದು ಜನರ ನಂಬಿಕೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts