ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ವಿಶೇಷ ಪೂಜೆ

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ಧನುರ್ಮಾಸದ ವಿಶೇಷ ಪೂಜೆ ನೆರವೇರಿತು.

ಇದಲ್ಲದೆ ಪಟ್ಟಣದ ದೇವಾಂಗದ ಶ್ರೀ ಚೌಡೇಶ್ವರಿ, ಶ್ರೀ ರಾಮಮಂದಿರ, ಶ್ರೀ ಬನಶಂಕರಿ ದೇವಾಲಯ ಸೇರಿದಂತೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮುಂಜಾನೆ ದೇವರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಹೊಸ ವರ್ಷದ ಪ್ರಯುಕ್ತ ದೇವಾಲಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.