ಪೈಪ್‌ಲೈನ್‌ಗಾಗಿ ರಸ್ತೆ ಅಗೆದ ರೈತ

ಹೊಳೆನರಸೀಪುರ: ಜಮೀನಿಗೆ ಕೊಳವೆಬಾವಿಯಿಂದ ಪೈಪ್‌ಲೈನ್ ಮೂಲಕ ನೀರು ಕೊಂಡೊಯ್ಯಲು ರಸ್ತೆಯನ್ನು ಕಿಲೋ ಮೀಟರ್‌ಗೂ ಹೆಚ್ಚು ದೂರ ಜೆಸಿಬಿ ಸಹಾಯದಿಂದ ಅಗೆದು ಹಾಳುಮಾಡಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮೆಣಿಗನಹಳ್ಳಿ ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ಕಲ್ಲೋಡೆಬಾರೆ ಕಾವಲಿನ ರಸ್ತೆ ಅಗೆದು ಪೈಪ್‌ಲೈನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಕಚೇರಿಗೆ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿಲ್ಲ ಹಾಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲವೆಂದು ಮೆಣಿಗನಹಳ್ಳಿ ನಿವಾಸಿ ಪುರುಷೋತ್ತಮ್ ದೂರಿದ್ದಾರೆ.

ಈ ಬಗ್ಗೆ ಪತ್ರಿಕೆ ದೊಡ್ಡಕಾಡನೂರು ಗ್ರಾಮ ಪಂಚಾಯಿತಿ ಪಿಡಿಒ ಸಂತೋಷ್ ಅವರನ್ನು ಸಂಪರ್ಕಿಸಿದಾಗ, ಸ್ಥಳ ಪರಿಶೀಲನೆ ನಡೆಸಿ ಮಹೇಶ್ ಎಂಬ ವ್ಯಕ್ತಿಗೆ ನೋಟಿಸ್ ನೀಡಲಾಗಿದೆ. ನೋಟಿಸ್‌ಗೆ ಅವರ ಉತ್ತರವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.