ಬೆಳಗಾವಿಯಲ್ಲಿ ರಂಗೇರಿದ ಹೋಳಿ ಸಂಭ್ರಮ: ಕುಣಿದು ಕುಪ್ಪಳಿಸಿದ ನೂರಾರು ಯುವತಿಯರು

ಬೆಳಗಾವಿ: ನಗರದಲ್ಲಿ ಹೋಳಿ ಸಂಭ್ರಮ ಮನೆ ಮಾಡಿದ್ದು, ಯುವಕ-ಯುವತಿಯರು, ಮಕ್ಕಳು, ಮಹಿಳೆಯರು ಪರಸ್ಪರ ಬಣ್ಣ ಎರಚಿ ಹೋಳಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದ್ದಾರೆ. ಸುಡು ಬಿಸಿಲನ್ನೂ ಲೆಕ್ಕಿಸದರೆ ಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ. ಬೆಳಗಾವಿ ಕ್ಲಬ್​ನಲ್ಲಿ ಮಹಿಳೆಯರಿಗಾಗಿ ವುಮೇನಿಯಾ ಹೋಳಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಯುವತಿಯರು ಭಾಗವಹಿಸಿ ಸಂಭ್ರಮಿಸಿದರು.