More

    ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ

    ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಶಾಲೆ ಹಾಗೂ ಕಚೇರಿಗಳಿಗೆ ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರವೂ ರಜೆ ಘೋಷಿಸಲಾಗಿದೆ.

    ಕೋವಿಡ್​19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ; ಸೋಮವಾರದಿಂದ ಎಸ್​ಎಸ್​ಎಲ್​ಸಿ ಮೌಲ್ಯಮಾಪನ; ವಾರದೊಳಗೆ ಮುಗಿಸಲು ಗಡುವು

    ಜುಲೈ 10ರಿಂದ ಆಗಸ್ಟ್​ 8ರ ವರೆಗಿನ ಅವಧಿಗೆ ಮಾತ್ರ ಎಲ್ಲ ಎರಡನೇ ಹಾಗೂ ನಾಲ್ಕನೇ ಶನಿವಾರಗಳಂದು ಈ ರಜೆ ಇರಲಿದೆ.

    ಕೋವಿಡ್​19 ಕಾರ್ಯಕ್ಕೆ ನಿಯೋಜಿತರಾಗಿರುವ ಹಾಗೂ ಎಲ್​ಎಸ್​ಎಲ್​ಸಿ ಮೌಲ್ಯಮಾಪನಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

    ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts