More

    ಅಂಗನವಾಡಿ ಕಾರ್ಯಕರ್ತೆಯರಿಗೆ ಬೇಸಿಗೆ ರಜೆ ಘೋಷಣೆ; ಎಂದಿನಿಂದ ಎಂದಿನವರೆಗೆ? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಮೇ 15ರಿಂದ 29ರವರೆಗೆ ಬೇಸಿಗೆ ರಜೆ ಘೋಷಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮೇ 1ರಿಂದ ನೀಡಬೇಕಿದ್ದ ರಜೆಯನ್ನು ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿ ಮೇ 15ರ ನಂತರ ನೀಡಲು ಸೂಚಿಸಲಾಗಿತ್ತು. ಅದರಂತೆ 2023-24ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರಿಗೆ ಬೇಸಿಗೆ ರಜೆ ಮಂಜೂರು ಮಾಡಲಾಗಿದ್ದು, ಸೋಮವಾರದಿಂದ ಮೇ 29ರವರೆಗೆ ಅಂಗನವಾಡಿಗಳಿಗೆ ರಜೆ ಇರಲಿದೆ.

    ಇದನ್ನೂ ಓದಿ: ಹನ್ನೊಂದರ ಈ ಹುಡುಗಿ ಐನ್​ಸ್ಟೀನ್​-ಸ್ಟೀಫನ್ ಹಾಕಿಂಗ್​ಗಿಂತಲೂ ಬುದ್ಧಿವಂತೆ!

    ಅದಾಗ್ಯೂ ರಜೆ ಅವಧಿಯಲ್ಲಿ ಪ್ರತಿ ಫಲಾನುಭವಿಗಳ ಮನೆ ಬಾಗಿಲಿಗೆ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚುಚ್ಚುಮದ್ದು, ಆರೋಗ್ಯ ತಪಾಸಣೆ ನಡೆಸಲು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ಸೂಚಿಸಿದ್ದಾರೆ.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ರಜೆ ಘೋಷಣೆಯಾಗುತ್ತದೆ. ಈ ಬಾರಿ ಚುನಾವಣೆ ಕಾರಣದಿಂದ ರಜೆ ಮುಂದೂಡಲಾಗಿತ್ತು. ಈ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿದ ಕಾರಣ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಇಲಾಖೆಯು ರಜೆ ಘೋಷಿಸಿದೆ ಎಂದು ತಿಳಿಸಿದರು.

    ಇನ್ನು ಕಾರ್ಪೋರೇಟ್ ಕಚೇರಿಗಳಲ್ಲೂ ಬಾರ್!; ಅಬಕಾರಿ ನೀತಿಯಲ್ಲೇ ಅವಕಾಶ: ಎಲ್ಲಿ, ಷರತ್ತುಗಳೇನು?

    ಮತ ಚಲಾಯಿಸಿದ ಬೆನ್ನಿಗೇ ‘ಕರೆಂಟ್ ಶಾಕ್​’: ಏ. 1ರಿಂದಲೇ ಜಾರಿಗೆ ಬರುವಂತೆ ವಿದ್ಯುತ್ ದರ ಏರಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts