ಬೆಂಗಳೂರು: ಮುಂದಿನ ವರ್ಷ ಅಂದರೆ 2023ನೇ ಸಾಲಿನಲ್ಲಿ ಒಟ್ಟು 19 ದಿನಗಳನ್ನು ಸಾರ್ವತ್ರಿಕ ರಜಾ ದಿನವನ್ನಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಈ ದಿನಗಳಲ್ಲಿ ಪ್ರಮುಖ ಹಬ್ಬಗಳು, ಗಣ್ಯರ ಜಯಂತಿಗಳು ಇರಲಿವೆ. ಸರ್ಕಾರ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಇಲ್ಲಿದೆ.
ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ ಶನಿವಾರದಂದು ಬರುವ ಖುತುಬ್-ಎ-ರಂಜಾನ್ (22.04.2023) ಮತ್ತು ಮಹರ್ಷಿ ವಾಲ್ಮೀಕಿ ಜಯಂತಿ (28.10.2023) ಈ ರಜಾ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.
ದಿನಾಂಕ: 01.04.2023 ವಾಣಿಜ್ಯ ಬ್ಯಾಂಕುಗಳ ಹಾಗೂ ಸಹಕಾರಿ ಬ್ಯಾಂಕುಗಳ ವಾರ್ಷಿಕ ಮುಕ್ತಾಯದ ದಿನ ಆಗಿರುವುದರಿಂದ, ಸದರಿ ದಿನದಂದು ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳಿಗೆ ಮಾತ್ರ ರಜಾ ಇರುತ್ತದೆ.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಿಸುವರು.
ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿವಸಗಳಿಗೆ ಮೀರದಂತೆ 2023ನೇ ವರ್ಷದಲ್ಲಿ ಅಧಿಸೂಚನೆ-1ರ ಅನುಬಂಧದಲ್ಲಿ ತಿಳಿಸಿರುವ ಪರಿಮಿತ ರಜೆಯನ್ನು ಪೂರ್ವಾನುಮತಿ ಪಡೆದು ಉಪಯೋಗಿಸಿಕೊಳ್ಳಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಪ್ರಸ್ತುತ ಅನುಮತಿಗೆ ಮಂಜೂರಾತಿ ನೀಡತಕ್ಕದ್ದು.