ಉತ್ತಮ ಶಿಕ್ಷಣದಿಂದ ಸದೃಢ ವ್ಯಕ್ತಿತ್ವ ರೂಪು : ಕಾರ್ಪೊರೇಟ್ ಮ್ಯಾನೇಜರ್ ಲಿಲ್ಲಿ ಪಿರೇರ ಅಭಿಮತ

blank

ಗುರುಪುರ: ಶಾಲೆಗಳಲ್ಲಿ ಮೌಲ್ಯಾಧರಿತ ಶಿಕ್ಷಣ ನೀಡಿದಲ್ಲಿ ವಿದ್ಯಾರ್ಥಿಗಳು ಸಮಾಜದಲ್ಲಿ ಸದೃಢ ವ್ಯಕ್ತಿಗಳಾಗಿ ಮೂಡಿಬರಲು ಸಾಧ್ಯ. ‘ಸಮೃದ್ಧ ಬದುಕಿಗಾಗಿ ಪರಿಪೂರ್ಣ ಶಿಕ್ಷಣ’ ಎಂಬ ಧ್ಯೇಯ ವಾಕ್ಯದಡಿ ಬೆಥನಿ ವಿದ್ಯಾ ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಾ ಬಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಪರಿಪೂರ್ಣ ಸೇವೆಗೈಯುತ್ತಿರುವ ಹೋಲಿ ಫ್ಯಾಮಿಲಿ ಶಾಲೆ ಇದೀಗ ವಜ್ರ ಮಹೋತ್ಸವ ಆಚರಿಸುತ್ತಿರುವುದು ಸಂಸತದ ಸಂಗತಿ ಎಂದು ಬೆಥನಿ ವಿದ್ಯಾಸಂಸ್ಥೆ ಮಂಗಳೂರು ಪ್ರಾಂತ್ಯಾಧಿಕಾರಿ ಹಾಗೂ ಕಾರ್ಪೊರೇಟ್ ಮ್ಯಾನೇಜರ್ ಲಿಲ್ಲಿ ಪಿರೇರ ಹೇಳಿದರು.

ಶಾಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಬಜ್ಪೆಯ ಅನುದಾನಿತ ಹೋಲಿ ಫ್ಯಾಮಿಲಿ ಪ್ರೌಢಶಾಲೆಯ ವಜ್ರ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಜ್ಪೆ ಚರ್ಚ್‌ನ ಧರ್ಮಗುರು ಅನಿಲ್ ಲೋಬೊ ಆಶೀರ್ವಚನ ನೀಡಿದರು. ರಾಯನ್ ಇಂಟರ್‌ನ್ಯಾಶನಲ್ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕಿ ಗ್ರೇಸ್ ಪಿಂಟೊ ಪರವಾಗಿ ಅವಿಟಾ ಡಿಸೋಜ, ಸಿಮನ್ಸ್ ಗನ್ ಹೌಸ್‌ನ ಮಾಲೀಕ ರಾಯ್ ಪ್ರಕಾಶ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲೆ ರಾಜಲಕ್ಷ್ಮೀ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೊ, ಸ್ಥಳೀಯ ನಜ್ರತ್ ಕಾನ್ವೆಂಟ್‌ನ ಮುಖ್ಯ ಭಗಿನಿ ಫ್ರೋರಿನ್ ಜ್ಯೋತಿ ಶುಭ ಹಾರೈಸಿದರು.

ದಕ್ಷಿಣ ಭಾರತ ವಲಯ ಮಟ್ಟದ ಶಾರ್ಟ್ ಗನ್ ಟ್ರಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಸತತ 3 ಬಾರಿ ಚಿನ್ನದ ಪದಕ ಪಡೆದ ಸಾಮ್ಯುವೆಲ್ ಸಿಮನ್ಸ್, ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ 9 ಮಂದಿ ಶಿಕ್ಷಕರು ಹಾಗೂ ದಾನಿಗಳನ್ನು ಗೌರವಿಸಲಾಯಿತು.

ರಕ್ಷಕಶಿಕ್ಷಕ ಸಂಘದ ಉಪಾಧ್ಯಕ್ಷ ಎಂ. ಕೆ. ಅಶ್ರಫ್ ಉಪಸ್ಥಿತರಿದ್ದರು.

ಶಾಲಾ ಸಂಚಾಲಕಿ ಸಿಸ್ಟರ್ ಪ್ಲಾವಿಯಾ ವಿಲ್ಮಾ ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕಿ ಸಿಸ್ಟರ್ ಜೆಸ್ಸಿ ಪ್ರೀಮಾ ಸ್ವಾಗತಿಸಿದರು. ಗಣಿತ ಶಿಕ್ಷಕ ವಾಸುದೇವ ರಾವ್ ಕುಡುಪು ನಿರೂಪಿಸಿದರು. ಶಿಕ್ಷಕರಾದ ಪ್ರಶಾಂತ್, ಯಶೋದಾ, ಧನ್ಯಾ, ನಯನಾ, ಗೀತಾಂಬಾ, ಶ್ರೀಜಾ ಹಾಗೂ ರೇಣುಕಾ ಸಹಕರಿಸಿದರು. ಕನ್ನಡ ಶಿಕ್ಷಕಿ ಲಿಲ್ಲಿ ಮಿನೇಜಸ್ ವಂದಿಸಿದರು.

ಕಯ್ಯರು ಶಾಲೆ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಗುರಿಯೊಂದಿಗೆ ಪ್ರಯತ್ನ ಮುಖ್ಯ : ಡಾ.ಉಜ್ವಲ್ ಯು.ಜೆ. ಸಲಹೆ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…