

kantara: ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ʻಕಾಂತಾರ ಚಾಪ್ಟರ್ 1ʼ ಸಿನಿಮಾದಿಂದ ಇಂದು (07) ಬಿಗ್ ಅಪ್ಡೇಟ್ ಸಿಕ್ಕಿದೆ.
ಇಂದು ಕಾಂತಾರ ಚಿತ್ರದ ಆಕ್ಟರ್, ಡೈರೆಕ್ಟರ್ ಆಗಿರುವ ರಿಷಬ್ ಶೆಟ್ಟಿಯ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿಯೇ ಕಾಂತಾರ ಚಾಪ್ಟರ್-1 ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಹೊಸ ಪೋಸ್ಟರ್ನಲ್ಲಿ ರಿಷಬ್ ಶೆಟ್ಟಿಯ ವಾರಿಯರ್ ಲುಕ್ ರಿವೀಲ್ ಆಗಿದೆ. ರಿಷಬ್ ಜನ್ಮ ದಿನಕ್ಕೆ ಹೊಂಬಾಳೆ ಸಂಸ್ಥೆ ತನ್ನ ಅಧಿಕೃತ ಪೇಜ್ ಅಲ್ಲಿಯೇ ಈ ಪೋಸ್ಟರ್ ರಿಲೀಸ್ ಆಗಿದೆ.
ಈ ಸಿನಿಮಾ ಇದೇ 2025ರ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಈ ಬಾರಿ ಅಕ್ಟೋಬರ್ 2ರ ಗಾಂಧಿ ಜಯಂತಿ ಗುರುವಾರ ಬಿದ್ದಿದೆ. ಹೀಗಾಗಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಿನಿಮಾ ಸಹಜವಾಗಿಯೇ ಒಳ್ಳೆಯ ಕಲೆಕ್ಷನ್ ಮಾಡಲಿದೆ. ಆ ಬಳಿಕ ಅಕ್ಟೋಬರ್ ಮಧ್ಯದಲ್ಲಿ ದೀಪಾವಳಿ ಬರಲಿದೆ. ಇದು ಕೂಡ ಸಿನಿಮಾಗೆ ಸಹಕಾರಿ ಆಗಲಿದೆ.
ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ನೀಡಿದ್ದಾರೆ. ಖ್ಯಾತ ಸಾಹಸ ನಿರ್ದೇಶಕ ಟೊಡರ್ ಲ್ಯಾಜರೋವ್ ಅವರು ಸಾಹಸ ದೃಶ್ಯಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್-1 ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರವನ್ನು ಹೊಂದಿದೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
(ಏಜೆನ್ಸೀಸ್)