More

    ಕಾಲಿವುಡ್​ಗೆ ಹೊಂಬಾಳೆ ಎಂಟ್ರಿ; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘು ತಥಾ’ ನಿರ್ಮಾಣ

    ಬೆಂಗಳೂರು: ಯಾವಾಗ ಕೀರ್ತಿ ಸುರೇಶ್​ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್​ನವರು ಶುಭ ಕೋರಿದರೋ, ಆಗಲೇ ಕೀರ್ತಿ ಅಭಿನಯದಲ್ಲಿ ವಿಜಯ್​ ಕಿರಗಂದೂರು ಹೊಸ ಚಿತ್ರ ನಿರ್ಮಿಸುವ ಸಾಧ್ಯತೆ ಇದೆ ಎಂಬ ಅಂದಾಜಿತ್ತು. ಅದೀಗ ನಿಜವಾಗಿದೆ. ಕೀರ್ತಿ ಅಭಿನಯದಲ್ಲಿ ಹೊಂಬಾಳೆ ಫೀಲಂಸ್​ ಹೊಸದೊಂದು ಚಿತ್ರವನ್ನು ಘೋಷಿಸಿದ್ದು, ಈ ಮೂಲಕ ಮೊದಲ ಬಾರಿಗೆ ತಮಿಳಿನಲ್ಲಿ ಒಂದು ಚಿತ್ರ ನಿರ್ಮಿಸುತ್ತಿದೆ.

    ಇದನ್ನೂ ಓದಿ: ರವಿವರ್ಮ ಆಕ್ಷನ್​ನಲ್ಲಿ ವಿಜಯಾನಂದ; ವಿಂಗ್ ಕಮಾಂಡರ್ ಅಭಿನಂದನ್ ವೆಬ್​ಸರಣಿಯಲ್ಲಿ ಕನ್ನಡಿಗನ ಕಮಾಲ್

    ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಮೊದಲ ತಮಿಳು ಚಿತ್ರದ ಹೆಸರು ‘ರಘುತಥಾ’. ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

    ‘ರಘು ತಥಾ’ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ತಿಸಲಾಗಿದೆ. ‘ರಘು ತಥಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

    ಈ ಚಿತ್ರದ ಕುರಿತು ಮಾತನಾಡುವ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ‘ಸಮಾಜದ ವಿರುದ್ದ ಸವಾಲೆಸೆಯುವ ಒಬ್ಬ ಗಟ್ಟಿಗಿತ್ತಿ ಯುವತಿಯ ಸುತ್ತ ಈ ಕಥೆ ಸುತ್ತತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿಹಿಡಿಯುವುದರ ಜತೆಗೆ, ಸಮಾಜದ ವಿರುದ್ಧ ಹೋರಾಡುತ್ತಲೇ, ಆಕೆ ಹೇಗೆ ಎಲ್ಲರಿಗೂ ಸ್ಫೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆ. ಇಂಥದ್ದೊಂದು ಕಥೆ ಮತ್ತು ಪಾತ್ರಕ್ಕೆ ಕೀರ್ತಿ ಸುರೇಶ್ ಅವರು ಅದ್ಭುತವಾದ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಫಿಲಂಸ್ ಹೆಮ್ಮೆ ಪಡುತ್ತದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಜನ ನಗುತ್ತಲೇ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ವಿಭಿನ್ನ ಪ್ರಯತ್ನ ಇದಾಗಲಿದೆ’ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುದೀಪ್ ದಂಪತಿ

    ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ಜೈ ಭೀಮ್ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ.

    ಹರಿದಾಡುತ್ತಿದ್ದ ಸುದ್ದಿಗೆ ಅಧಿಕೃತ ಮುದ್ರೆ ಒತ್ತಿದ ಸಿಂಹ ಪ್ರಿಯಾ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts