17.8 C
Bengaluru
Wednesday, January 22, 2020

ಹುಕ್ಕೇರಿ: ಮನೆ ನಿರ್ಮಾಣ ಕಡ್ಡಾಯ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಹುಕ್ಕೇರಿ: ಅತಿವೃಷ್ಟಿಯಿಂದ ಕುಸಿದ 3331 ಮನೆಗಳ ಪೈಕಿ ಎ ಹಾಗೂ ಬಿ ಕೆಟಗರಿಯ 1594 ಮನೆಗಳಿಗೆ ಮೊದಲ ಕಂತಾಗಿ 1 ಲಕ್ಷ ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಅದರಲ್ಲಿ ಕೇವಲ 78 ಜನ ಮಾತ್ರ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ.

ಇನ್ನುಳಿದವರು ತಿಂಗಳೊಳಗಾಗಿ ಮನೆ ನಿರ್ಮಿಸಿಕೊಳ್ಳಲು ಮುಂದಾಗದಿದ್ದರೆ ಜಮೆಯಾದ ಪರಿಹಾರ ಮೊತ್ತ ಮರಳಿ ಸರ್ಕಾರಕ್ಕೆ ಭರಿಸಲು ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸುವುದಾಗಿ ಶಾಸಕ ಉಮೇಶ ಕತ್ತಿ ಎಚ್ಚರಿಸಿದ್ದಾರೆ.

ಸ್ಥಳೀಯ ತಹಸೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ನೆರೆ ಪರಿಹಾರ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ 5 ಬಾರಿ ನಡೆಸಿದ ಪರಿಶೀಲನೆ ಸಭೆಯಲ್ಲಿ ಎಲ್ಲ ಅಧಿಕಾರಿಗಳಿಗೆ ನೆರೆ ಪರಿಹಾರ ಸಂಬಂಧಿಸಿದಂತೆ ಶೀಘ್ರ ವರದಿ ಸಲ್ಲಿಸಲು ಸೂಚಿಸಿದ್ದೆ. ವರದಿ ಪ್ರಕಾರ ಎ ಕೆಟಗರಿಯಲ್ಲಿ 451, ಬಿ.ಕೆಟಗರಿಯಲ್ಲಿ 1143 ಮನೆಗಳು ಹಾಗೂ 1737 ಮನೆಗಳು ಸಿ ಕೆಟಗೇರಿಯವು ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಸಿ ಕೆಟಗರಿಯವರಿಗೆ 50 ಸಾವಿರ ರೂ. ಒಮ್ಮೆ ನೀಡಲಾಗಿದ್ದರೆ, ಉಳಿದ ಎ,ಬಿ ಕೆಟಗರಿಯವರಿಗೆ 3 ಹಂತದಲ್ಲಿ ಒಟ್ಟು 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಜತೆಗೆ ಅವರಿಗೆ 5 ತಿಂಗಳು 5 ಸಾವಿರ ರೂ.ಗಳಂತೆ ಬಾಡಿಗೆ ಹಣ ಸಹ ವಿತರಿಸಲಾಗಿದೆ ಎಂದರು. ಆದರೆ ಸಂತ್ರಸ್ತರ ಪೈಕಿ ಬಹುಪಾಲು ಜನ ಮನೆ ನಿರ್ಮಿಸಿಕೊಳ್ಳದಿರುವುದು ಬೇಸರ ಮೂಡಿಸಿದೆ ಎಂದರು.

ರೈತರ ಬೆಳೆ, ಕುಸಿದ ಮನೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳು, ರಸ್ತೆ, ಸೇತುವೆ ಹಾಳಾಗಿದ್ದು, ಅವುಗಳಿಗೆ ಪರಿಹಾರ ಮೊತ್ತವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿರುವೆ.
ದೇಶದಲ್ಲಿ ಸಹಕಾರಿ ತತ್ತ್ವದಡಿ ನಡೆಸುವ ಏಕೈಕ ವಿದ್ಯುತ್ ವಿತರಣೆ ಸಂಘಕ್ಕೆ 9.30 ಕೋಟಿ ರೂ. ಹಾನಿಯಾಗಿದೆ. ಅದರ ಪರಿಹಾರ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯಿತಿ ಇಒ ಎಂ.ಎಸ್.ಬಿರಾದಾರಪಾಟೀಲ, ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ತಹಸೀಲ್ದಾರ್ ರೇಷ್ಮಾ ತಾಳಿಕೋಟೆ ಸ್ವಾಗತಿಸಿದರು.


ಪ್ರತಿ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಸಭೆ ನಡೆಸುವೆ. ಸಭೆಯಲ್ಲಿ ಎಲ್ಲ ಇಲಾಖೆಯ ಮುಖ್ಯಸ್ಥರು ಪಾಲ್ಗೊಳ್ಳಬೇಕು. ಯಾರಾದರೂ ಸಬೂಬು ಹೇಳಿ ಗೈರಾದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕಾಗುತ್ತದೆ.
| ಉಮೇಶ ಕತ್ತಿ ಶಾಸಕ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...