ಗೃಹ ರಕ್ಷಕ ದಳದ ಸಿಬ್ಬಂದಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ : ಡಿವೈಎಸ್ಪಿ ವೀರಣ್ಣ

Home Guard
Published on

ಮೈಸೂರು: ಗೃಹ ರಕ್ಷಕ ದಳದ ಸಿಬ್ಬಂದಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಡಿಎಆರ್‌ನ ಡಿವೈಎಸ್ಪಿ ವೀರಣ್ಣ ಕರೆ ನೀಡಿದರು.

ಜ್ಯೋತಿನಗರದ ಡಿಎಆರ್ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾ ಗೃಹ ರಕ್ಷಕ ದಳದಿಂದ ಆಯೋಜಿಸಿದ್ದ ಗೃಹ ರಕ್ಷಕರ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮೂರು ತಿಂಗಳ ಹಿಂದೆ ಸಾಮಾನ್ಯ ಪ್ರಜೆಗಳಾಗಿದ್ದ ನೀವು ಇದೀಗ ಗೃಹ ರಕ್ಷಕ ದಳ ಸಿಬ್ಬಂದಿಯಾಗಿ ನೇಮಕಗೊಂಡಿದ್ದೀರ. ನಿಮಗೂ ಪೊಲೀಸರಂತೆ ಸಮವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತ್ತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ರಕ್ಷಣಾ ಕಾರ್ಯದಲ್ಲಿ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು ಎಂದರು.

ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ.ಎಂ.ಕಾಂತರಾಜು ಮಾತನಾಡಿ, ಗೃಹ ರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆಯೊಂದಿಗೆ ಸರ್ಕಾರದ 57 ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಸಿಗಲಿದೆ. ಸಮರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸಲು ಗೃಹ ರಕ್ಷಕ ದಳ ಉತ್ತಮ ವೇದಿಕೆಯಾಗಿದೆ ಎಂದರು.

ಗೃಹರಕ್ಷಕ ದಳದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನ್ ಎಂ. ನಾಲತ್‌ವಾಡ್, ಉಪ ಕಮಾಂಡೆಂಟ್ ಎಸ್.ಆರ್. ಗಾಯಕ್ವಾಡ್, ಬೋಧಕರಾದ ಎಂ.ಆರ್. ಚಂದನ್, ಎಸ್. ಮಂಜುನಾಥ್, ಎಂ. ಶಿಲ್ಪಾ, ಎಸ್. ವಿದ್ಯಾಶ್ರೀ, ಎ.ಎಸ್. ಶ್ರುತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net