ಸ್ಯಾಂಟ್ರೋ ರವಿ ಕೇಸ್​ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ

Santro Ravi
Published on

ಬೆಂಗಳೂರು: ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್​ ಮಂಜುನಾಥ್​, ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ. ಜ.13ರಂದು ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿ ಜ.14ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಇದೀಗ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net