More

    ಗೃಹಸಚಿವ ಡಾ. ಜಿ. ಪರಮೇಶ್ವರ ಸೂಚನೆ; ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಶ್ರಮಿಸಿ

    ಧಾರವಾಡ: ಪೊಲೀಸ್ ಅಽಕಾರಿಗಳು ಹಾಗೂ ಸಿಬ್ಬಂದಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಶ್ರಮಿಸಬೇಕು. ಇಲಾಖೆಯ ಬಗ್ಗೆ ಸಮಾಜದ ಪ್ರತಿಯೊಬ್ಬರಲ್ಲಿ ಉತ್ತಮ ಅಭಿಪ್ರಾಯ ಮೂಡುವಂತೆ ಕಾರ್ಯನಿರ್ವಹಿಸಬೇಕು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು.
    ನಗರದ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
    ಪ್ರತಿ ಪೊಲೀಸ್ ಠಾಣೆಯಿಂದ ಪ್ರತಿ ತಿಂಗಳು ಒಬ್ಬ ಅಽಕಾರಿ ಒಂದು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ ಶಾಲಾ ಮಕ್ಕಳಲ್ಲಿ ಇಲಾಖೆಯ ಕಾರ್ಯವೈಖರಿ, ಪೋಕ್ಸೋದಂಥ ಪ್ರಮುಖ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು. ಶಾಲೆ- ಕಾಲೇಜುಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಮೊಬೈಲ್ ಬಳಕೆ, ಪೋಕ್ಸೋ, ಸಂಚಾರ ನಿಯಮಗಳು, ಪೊಲೀಸ್ ನೆರವಿನ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
    ಪೊಲೀಸ್ ಸಿಬ್ಬಂದಿಗೆ ವಸತಿ, ಕುಡಿಯುವ ನೀರು ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಹೊಸ ಪೊಲೀಸ್ ಠಾಣೆಗಳಿಗಾಗಿ ಹೊಸ ವಸತಿ ಸಮುಚ್ಛಯ ಮತ್ತು ಇತರ ಮೂಲ ಸೌಲಭ್ಯಗಳಿಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರದ ಹಂತದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆಸ್ತಿ ವಿವಾದ, ಹಣಕಾಸಿನ ವ್ಯವಹಾರ, ರಿಯಲ್ ಎಸ್ಟೇಟ್‌ದಂತಹ ಪ್ರಕರಣಗಳಲ್ಲಿ ಆಸಕ್ತಿ ವಹಿಸದೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಕಾಪಾಡಲು ಜನಸಂಪರ್ಕ ಸಭೆ, ಸಾರ್ವಜನಿಕ ಶಾಂತಿ- ಸೌಹಾರ್ದ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಫೇಸ್‌ಬುಕ್, ವಾಟ್ಸ್ಆ್ಯಪ್, ಟ್ವಿಟ್ಟರ್‌ದಂಥ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸೈಬರ್ ವಂಚನೆಗಳ ತಡೆಗೆ ಜಾಗೃತಿ ಮೂಡಿಸಬೇಕು ಎಂದರು.
    ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸಕುಮಾರ ವಿಕಾಸ್, ಎಸ್‌ಪಿ ಲೋಕೇಶ ಜಗಲಾಸರ್ ಹಾಗೂ ಡಿವೈಎಸ್‌ಪಿಗಳು, ಸಿಪಿಐ, ಪಿಎಸ್‌ಐಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts