More

    ಪಿಎಫ್​ಐ ಸಂಘಟನೆಯನ್ನು ನಿಷೇಧಿಸಿದ್ದೇಕೆ?: ಗೃಹ ಸಚಿವರು ನೀಡಿದ ಸ್ಪಷ್ಟನೆ ಇಲ್ಲಿದೆ..

    ಶಿವಮೊಗ್ಗ: ಪಿಎಫ್‌ಐ ಸಂಘಟನೆಯನ್ನು ಧರ್ಮದ ಆಧಾರದ ಮೇಲೆ ನಿಷೇಧಿಸಿಲ್ಲ. ಯುವಕರಿಗೆ ದೇಶದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಆಗುತ್ತಿದೆ ಎನ್ನುವ ಕಾರಣಕ್ಕೆ ನಿಷೇಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಂದ ಬಹಳ ಅಪೇಕ್ಷೆವಿತ್ತು. ಸಾರ್ವಜನಿಕರ ಅಪೇಕ್ಷೆಯಂತೆ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಮತ್ತೊಂದು ಸಂಘಟನೆ ಈ ರೀತಿ ಹುಟ್ಟಿಕೊಳ್ಳಬಹುದು. ಆದರೆ ಪೊಲೀಸರು ಈ ಎಲ್ಲ ಸಂಘಟನೆಯವರ ಚಲನವಲನದ ಮೇಲೆ ಗಮನ ಹರಿಸುತ್ತಿದ್ದಾರೆ ಎಂದರು.

    ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಪಿಎಫ್‌ಐ ಸಂಘಟನೆ ಮೇಲಿನ ಕೇಸ್‌ಗಳನ್ನು ಹಿಂಪಡೆಯಲಾಗಿತ್ತು. ಸಿದ್ದರಾಮಯ್ಯ ಮತ ಬ್ಯಾಂಕ್‌ಗಾಗಿ ಆರ್‌ಎಸ್‌ಎಸ್‌ಅನ್ನು ನಿಷೇಧಿಸಿ ಎನ್ನುತ್ತಿದ್ದಾರೆ. ಈ ನಡವಳಿಕೆ ಸರಿಯಲ್ಲ. ಯಾವ ಯಾವ ಸಂಘಟನೆಗಳು ಭಯೋತ್ಪಾದನೆ ಕೃತ್ಯದಲ್ಲಿ ತೊಡಗುತ್ತವೆಯೋ ಅಂತಹ ಸಂಘಟನೆಗಳನ್ನು ಬ್ಯಾನ್ ಮಾಡಲಾಗುತ್ತದೆ. ಎಸ್‌ಡಿಪಿಐ ರಾಜಕಾರಣದಲ್ಲಿದ್ದು ದೇಶ ವಿರೋಧಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ಕೋಮುಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡಿದರೆ ಸರ್ಕಾರ ಕ್ರಮಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದರು.

    ರಾಜಕೀಯ ಸ್ವರೂಪ ಪಡೆಯುತ್ತದಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಯಾವುದೇ ಕಾರಣಕ್ಕೂ ರಾಜಕೀಯ ಸ್ವರೂಪ ಪಡೆಯುವುದಿಲ್ಲ. ಶಿವಮೊಗ್ಗದಲ್ಲಿ ಎಫ್‌ಐಆರ್ ಹಾಕದಿದ್ದರೆ ಯಾವುದೇ ರಾಷ್ಟ್ರವಿರೋಧಿ ಕೃತ್ಯ ಕಂಡುಬರುತ್ತಿರಲಿಲ್ಲ. ಪಿಎಫ್‌ಐ ಬ್ಯಾನ್‌ನಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಮತ್ತೆ ಇಂತಹ ಕೃತ್ಯ ಕಂಡು ಬಂದರೆ ಕಠಿಣ ಕ್ರಮವಾಗುತ್ತದೆ ಎಂದು ಎಚ್ಚರಿಸಿದರು.

    ಸಿಡಿಲು ಬಡಿದು ತಾಯಿ ಮಕ್ಕಳಿಬ್ಬರ ಮರಣ, ಮೈದುನನ ಸ್ಥಿತಿ ಗಂಭೀರ..

    ಹುಣಸೇಮರದಲ್ಲಿ ಕೋತಿಗಳಿಗೆ ನೇಣು; 2 ಮಂಗಗಳ ಸಾವು, ಇನ್ನೆರಡು ಬಚಾವು: ಇದೆಂಥ ವಿಕೃತಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts