More

    ಜನರಲ್ ಬಿಪಿನ್ ರಾವತ್ ಬಗ್ಗೆ ವಿಕೃತ ಪೋಸ್ಟ್! ದೇಶವಿರೋಧಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ

    ಬೆಂಗಳೂರು: ಭಾರತೀಯ ಸೇನಾ ಪಡೆಯ ವೀರ ಸೇನಾನಿ ಮತ್ತು ಸೇನಾ ಪಡೆಗಳ ಮುಖ್ಯಸ್ಥ ಜನರಲ್​​ ಬಿಪಿನ್ ರಾವತ್ ಅವರ ಅಕಾಲಿಕ ಸಾವಿನ ಕುರಿತು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರನ್ನು ಯಾವುದೇ ವಿಳಂಬವಿಲ್ಲದಂತೆ ಪತ್ತೆ ಹಚ್ಚಿ ತೀವ್ರ ಕ್ರಮ ತೆಗೆದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

    ದೇಶದ ಹೆಮ್ಮೆಯ ಸೇನಾನಿಯ ಸಾವಿನ ಬಗ್ಗೆ ಸಂಭ್ರವಿಸುವಂತಹ ಭಾವನೆಗಳನ್ನು ಜಾಲತಾಣದಲ್ಲಿ ಹರಿಬಿಡುವ ದುಷ್ಕರ್ಮಿಗಳು ದೇಶವಿರೋಧಿಗಳಾಗಿದ್ದಾರೆ. ಅವರ ವಿಳಾಸವನ್ನು ಪತ್ತೆ ಹಚ್ಚಿ ವಿಕೃತ ಮನಸ್ಸುಗಳಿಗೆ ತಕ್ಕ ಶಿಕ್ಷೆ ಆಗಬೇಕು. ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಮಾತನಾಡಿ, ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಚಿವ ಜ್ಞಾನೇಂದ್ರ ಹೇಳಿದರು.

    ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಪ್ರಚೋದನೆ ಮಹಿಳೆಯ ಬಂಧನ

    ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಸಾವು ದೇಶಕ್ಕೆ ಭರಿಸಲಾಗದ ಅತಿ ದೊಡ್ಡ ನಷ್ಟ. ರಾವತ್ ಅವರು ದೇಶಕ್ಕೆ ಸಲ್ಲಿಸಿರುವ ಸೇವೆ ಅಸಾಧಾರಣ ಎಂದಿರುವ ಸಚಿವರು, ದಿವಂಗತರ ಬಗ್ಗೆ ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ, ಅವರಿಗೆ ಶಿಕ್ಷೆಯಾಗಬೇಕು ಎಂದರು.

    ಇಡೀ ದೇಶದ ಅಶ್ರುತರ್ಪಣದ ನಡುವೆ ಜನರಲ್​ ಬಿಪಿನ್​ ರಾವತ್​ ಅಂತ್ಯಕ್ರಿಯೆ

    ಶಿಕ್ಷಕನ ತಲೆ ಮೇಲೆ ಕಸದಬುಟ್ಟಿ ಹಾಕಿ ಪುಂಡಾಟ ಮೆರೆದಿದ್ದ 6 ವಿದ್ಯಾರ್ಥಿಗಳ ವಿರುದ್ಧ ದಾಖಲಾಯ್ತು ಪೊಲೀಸ್​ ಕೇಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts