ಪರೇಶ್​ ಮೇಸ್ತಾ ಸಾವಿನ ಪ್ರಕರಣ ಸಿಬಿಐ ತನಿಖೆಗೆ

<< ಕುಟುಂಬಸ್ಥರ ಮನವಿ ಮೇರೆಗೆ ಸಿಬಿಐ ತನಿಖೆಗೆ ವಹಿಸಿದ ಗೃಹ ಸಚಿವರು >>

ಬೆಂಗಳೂರು: ಹಿಂದು ಕಾರ್ಯಕರ್ತ ಪರೇಶ್​ ಮೇಸ್ತಾ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಬುಧವಾರ ತಿಳಿಸಿದ್ದಾರೆ.

ಬಿಜೆಪಿ ಪ್ರತಿಭಟನೆಯಿಂದ ಸಿಬಿಐ ತನಿಖೆಗೆ ನೀಡಿಲ್ಲ. ಕುಟುಂಬಸ್ಥರ ಮನವಿ ಮೇರೆಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ಯಾವಾಗ ಬೇಕಾದರೂ ತನಿಖೆ ಮಾಡಲಿ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.

ಇದಕ್ಕೂ ಮೊದಲು ಸಿಬಿಐ ತನಿಖೆಗೆ ಒತ್ತಾಯಿಸುವಂತೆ ಹೋರಾಡಲು ಬಿಜೆಪಿ ಸಜ್ಜಾಗಿತ್ತು. ಪರೇಶ್​ ಮೇಸ್ತಾ ತಂದೆ ಕಮಲಾಕರ್ ಕೂಡ ಮಗನ ಕೊಲೆಯಾಗಿದ್ದು, ಪೊಲೀಸರ ಮೇಲೆ ನಂಬಿಕೆಯಿಲ್ಲ. ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ಗೆ ವಹಿಸಬೇಕೆಂದು ಆಗ್ರಹಿಸಿದ್ದರು.

ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಶಿರಸಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಹಿಂದು ಸಂಘಟನೆಗಳು ಮಂಗಳವಾರ ನಡೆಸಿದ ಪ್ರತಿಭಟನೆ ವೇಳೆ ಕಲ್ಲು ತೂರಾಟವಾಗಿ ವಾತಾವರಣ ಪ್ರಕ್ಷುಬ್ಧವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್ ಮಾಡಿ ಅಶ್ರುವಾಯು ಸಿಡಿಸಿದ್ದರು. ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಅದಕ್ಕೂ ಮುನ್ನ ಐಜಿಪಿ ಹೇಮಂತ್​ ನಿಂಬಾಳ್ಕರ್ ಅವರ ಕಾರಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *