ಗೃಹ ಸಚಿವರು ರಾಜೀನಾಮೆ ನೀಡಲಿ: ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಆಗ್ರಹ

ಮೈಸೂರು: ಬೆಂಗಳೂರಿನ ಕೆ.ಜೆ.ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ನಡೆದ ಮಾದರಿಯಲ್ಲಿ ಮೈಸೂರಿನಲ್ಲೂ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ರಾತ್ರೋರಾತ್ರಿ ಶಾಂತಿ ಕದಡುವ ಕೆಲಸ ಅಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈಗ ನಡೆದಿರುವ ಇಂತಹ ಕೋಮು ಘಟನೆ ಐದನೆಯದ್ದಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಈಗ ನೆಪ ಮಾತ್ರಕ್ಕೆ ಸರ್ಕಾರ ಇದೆಯಷ್ಟೇ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ರಾತ್ರೋರಾತ್ರಿ ಸಾವಿರಾರು ಜನರು ಜಮಾವಣೆಯಾಗಿ ಪೊಲೀಸರ ಮೇಲೆಯೇ ದಾಳಿ ಮಾಡಿ ಗಾಯಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆಯೇ ರಕ್ಷಣೆ ಇಲ್ಲವಾಗಿದೆ. ಗುಪ್ತಚಾರ ವಿಭಾಗ ಸಂಪೂರ್ಣ ವಿಫಲವಾಗಿದೆ ಎಂದರು.
ಮೈಸೂರಿನಲ್ಲಿ ನಡೆದಿರುವ ಅಹಿತಕರ ಘಟನೆ ಕಾಂಗ್ರೆಸ್‌ನ ಷಡ್ಯಂತ್ರದ ಒಂದು ಭಾಗವಾಗಿದೆ. ಉದಯಗಿರಿಗೆ ಪೊಲೀಸರು ಮಾತ್ರವಲ್ಲದೇ ಮಾಧ್ಯಮ ಪ್ರತಿನಿಧಿಗಳು ನಿರ್ಭೀತಿಯಿಂದ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ಗೆ ಮುಸ್ಲಿಮರು ಮತ ಹಾಕುತ್ತಾರೆ ಎಂದು ಅವರನ್ನು ಓಲೈಕೆ ಮಾಡಿ ಪೋಷಿಸುತ್ತಿದಾರೆ. ಮಂಗಳೂರಿನಲ್ಲಿ ಕುಕ್ಕರ್‌ಬಾಂಬ್ ಸ್ಫೋಟ ಮಾಡಿದವರನ್ನು ಡಿ.ಕೆ. ಶಿವಕುಮಾರ್ ಬ್ರದರ್ಸ್ ಎಂದು ಕರೆದರು. ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಗಲಾಟೆ ಪ್ರಕರಣದಲ್ಲಿ ಜಮೀರ್ ಅಹ್ಮದ್‌ಖಾನ್ ಆರೋಪಿಗಳ ಪರ ನಿಂತರು. ಜೈಲಿನಿಂದ ಬಿಡುಗಡೆಯಾದವರನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು ಎಂದು ಟೀಕಿಸಿದರು.
ಅಖಂಡ ಶ್ರೀನಿವಾಸ್‌ಮೂರ್ತಿ ಮನೆಗೆ ಬೆಂಕಿ ಹಚ್ಚಿದರೂ ಅವರ ಪರ ಕಾಂಗ್ರೆಸ್ ನಿಲ್ಲಲಿಲ್ಲ. ಗಲಭೆ ಮಾಡಿದವರ ಪರ ಇದ್ದ ಪ್ರಕರಣವನ್ನು ಕಾಂಗ್ರೆಸ್ ವಾಪಸ್ ಪಡೆಯಿತು. ಕಾಂಗ್ರೆಸ್ ಸರ್ಕಾರದ ಇಂತಹ ಕುಮ್ಮಕ್ಕಿನಿಂದ ಕೋಮುಗಲಭೆ ಹೆಚ್ಚಾಗುತ್ತಿದೆ ಎಂದು ದೂರಿದರು.
ಪೊಲೀಸ್ ಠಾಣೆ ಬಳಿಯೇ ಸರ್ ತನ್ ಕಿ ಜುದಾ ಎಂದು ಘೋಷಣೆ ಕೂಗುತ್ತಾರೆ. ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್‌ಸೇಠ್ ಅವರ ಕತ್ತು ಸೀಳುವ ಕೆಲಸ ಮಾಡಿದರು. ಆದರೂ ತನ್ವೀರ್ ಸೇಠ್ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಹರಿಹಾಯ್ದರು.
ಶಾಂತಿ ಕದಡುವ ರೀತಿಯಲ್ಲಿ ಯಾವುದೇ ಪೋಸ್ಟ್ ಹಾಕಿದ್ದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗಗೆದುಕೊಂಡರೆ ಅದನ್ನು ಸ್ವಾಗತಿಸುತ್ತೇವೆ. ಆದರೆ ಅದನ್ನೇ ನೆಪವಾಗಿಟ್ಟುಕೊಂಡು ಕಾನೂನು ಮೀರಿ ವರ್ತಿಸುವುದು ಸರಿಯಲ್ಲ ಎಂದರು.
ಕಾರ್ಮಿಕ ಇಲಾಖೆಯಲ್ಲಿಯೇ ಲೂಟಿ ನಡೆಯುತ್ತಿದ್ದರೂ, ಸಚಿವ ಸಂತೋಷ್ ಲಾಡ್ ಅದನ್ನು ಗಮನಿಸದೆ ಮಾನಸಿಕ ಸ್ತಿಮಿತ ಕಳೆದುಕೊಂಡವರಂತೆ ಪ್ರಧಾನಿ ನರೇಂದ್ರಮೋದಿ ಕುರಿತು ಟೀಕೆ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂದು ಹೋಗಿ ನೋಡಿಕೊಂಡು ಬರಲಿ. ಅಲ್ಲಿ ಬಾಲ ಬಿಚ್ಚಿದ್ರೆ ಬುಲ್ಡೋಜರ್ ಮುಖಾಂತರ ಹಾಗೂ ಬುಲೆಟ್ ಮುಖಾಂತರ ಉತ್ತರ ಕೊಡುತ್ತಾರೆ ಎಂದರು.
ಗಲಭೆಗೆ ಕುಮ್ಮಕ್ಕು ನೀಡಿ ಶಾಂತಿ ಕದಡುವ ಪಿಎಫ್‌ಐ ಸಂಘಟನೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಎಸ್‌ಡಿಪಿಐ ಅದನ್ನು ಚುನಾವಣಾ ಆಯೋಗ ನಿಷೇಧಿಸಬೇಕು ಎಂದು ಹೇಳಿದರು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…