More

    ಗೃಹ ಸಚಿವರ ಬೆಂಗಾವಲು​ ವಾಹನ ಡಿಕ್ಕಿ, ಬೈಕ್ ಸವಾರ ಸಾವು; ಅಪಘಾತದ ಬಗ್ಗೆ ತಿಳಿದೂ ಹಾಗೇ ಹೋದ್ರಾ ಹೋಂ​ ಮಿನಿಸ್ಟರ್​?

    ಹಾಸನ: ಗೃಹ ಸಚಿವರಿಗೆ ಎಸ್ಕಾರ್ಟ್ ಮಾಡುತ್ತಿದ್ದ ಪೊಲೀಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವಿಗೀಡಾದ ಪ್ರಕರಣ ಸಂಭವಿಸಿದೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿಯೇ ಈ ಅಪಘಾತ ಸಂಭವಿಸಿದೆ.

    ಇದನ್ನೂ ಓದಿ: ರಾಜ್ಯದ ಜನತೆಗೆ ರೈಲ್ವೇಯಿಂದ ಸಿಹಿಸುದ್ದಿ: ಇಲ್ಲೆಲ್ಲ ನಿಲ್ಲಲಿವೆ ಈ ರೈಲುಗಳು!

    ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಸಾವಿಗೀಡಾದ ಬೈಕ್ ಸವಾರ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಡಿಆರ್ ಇನ್​ಸ್ಪೆಕ್ಟರ್ ರಾಮು ಎಸ್ಕಾರ್ಟ್ ಮಾಡುತ್ತಿದ್ದರು. ಈ ವೇಳೆ ಪೆಟ್ರೋಲ್ ಬಂಕ್‌ನಿಂದ ಬರುತ್ತಿದ್ದ ಬೈಕ್ ಸವಾರ ಎಸ್ಕಾರ್ಟ್ ವಾಹನಕ್ಕೆ ಅಡ್ಡ ಬಂದಿದ್ದ ಎನ್ನಲಾಗಿದೆ.

    ಇದನ್ನೂ ಓದಿ: ಮಧ್ಯಂತರ ಪರಿಹಾರಕ್ಕೆ ಅಂಕಿತ: ಮೂಲ ವೇತನದ ಶೇ.17 ಹೆಚ್ಚಳ; ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ, ನಿವೃತ್ತರಿಗೂ ಅನ್ವಯ

    ಕೆಎ 13 ಜಿ 1467 ನಂಬರ್‌ನ ಪೊಲೀಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೈಕ್ ಸವಾರ ರಮೇಶ್ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮತ್ತೊಂದೆಡೆ ಅಪಘಾತದ ವಿಚಾರ ತಿಳಿದರೂ ಗೃಹ ಸಚಿವರು ವಾಹನ ನಿಲ್ಲಿಸದೆ ಹಾಗೇ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

    16 ಸಲ ಚುಚ್ಚಿಕೊಂದ ಹುಚ್ಚುಪ್ರೇಮಿ; ಪ್ರೇಯಸಿಯ ಕೊಲ್ಲಲೆಂದೇ 2 ಚಾಕುಗಳನ್ನು ಖರೀದಿಸಿದ್ದ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

    ಮನೆಯೊಳಗಿನ ಗಣೇಶನ ಫೋಟೋ ಫ್ರೇಮ್​ ಒಳಗಿತ್ತು ನಾಗರಹಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts