More

    ಬಿಜೆಪಿ ಸಂಘಟನೆಗೆ ಶ್ರಮಿಸಿ – ರಮೇಶ ಕತ್ತಿ

    ಹುಕ್ಕೇರಿ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಮನೆ ಮನೆಗೆ ತಲುಪಿಸಲು ಶ್ರಮಿಸಬೇಕು ಎಂದು ಬಿಜೆಪಿ ನೂತನ ಪದಾಧಿಕಾರಿಗಳಿಗೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಂಸದ ರಮೇಶ ಕತ್ತಿ ಸಲಹೆ ನೀಡಿದ್ದಾರೆ.

    ತಾಲೂಕಿನ ಬೆಲ್ಲದ ಬಾಗೇವಾಡಿಯ ತಮ್ಮ ಮನೆಗೆ ಶನಿವಾರ ಆಗಮಿಸಿದ್ದ ಬಿಜೆಪಿ ಜಿಲ್ಲಾ ಮತ್ತು ತಾಲೂಕುಮಟ್ಟದ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಾಡಿರುವ ಜನಪರ ಕಾರ್ಯಗಳ ಕುರಿತು ಕಾರ್ಯಕರ್ತರು ನಿರಂತರ ಜನಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

    ಹುಕ್ಕೇರಿ ತಾಲೂಕಿನಲ್ಲಿ ಶಾಸಕ ಉಮೇಶ ಕತ್ತಿ ಅವರು ರೈತರಿಗಾಗಿ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿದ್ದಾರೆ. ಸುಗಮ ಸಂಚಾರಕ್ಕೆ ರಸ್ತೆಗಳ ನಿರ್ಮಾಣ, ಶೈಕ್ಷಣಿಕ ಪ್ರಗತಿಗಾಗಿ ಶಾಲಾ ಕಟ್ಟಡ, ವಸತಿ ನಿಲಯಗಳನ್ನು ನಿರ್ಮಿಸಿದ್ದಾರೆ. ಈ ವಿಷಯವನ್ನು ಹೆಚ್ಚು ಪ್ರಚಾರಕ್ಕೆ ಬಳಸಿಕೊಳ್ಳಬೇಕು. ಯುವ ಸಮುದಾಯಕ್ಕೆ ಪಕ್ಷದ ಆಶಯ ತಿಳಿಸಿ, ಸಂಘಟನೆಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. ನಂತರ ಪದಾಧಿಕಾರಿಗಳು ವಿಶ್ವರಾಜ ಶುಗರ್ಸ್‌ನಲ್ಲಿ ಶಾಸಕ ಉಮೇಶ ಕತ್ತಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

    ಹುಕ್ಕೇರಿ ಬಿಜೆಪಿ ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಜಯಗೌಡ ಪಾಟೀಲ, ರೈತ ಮೋರ್ಚಾ ಅಧ್ಯಕ್ಷ ಸತ್ಯಪ್ಪ ನಾಯಿಕ, ಗುರಪ್ಪ ತಳವಾರ, ಯಮಕನಮರಡಿ ಮಂಡಲ ಅಧ್ಯಕ್ಷ ಶ್ರೀಶೈಲ ಯಮಕನಮರಡಿ, ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ
    ಮರಡಿ, ಬಸವರಾಜ ಕರಡಿ, ಸಿದ್ದಣ್ಣ ನೊಗನಿಹಾಳ, ಶಿವಾನಂದ ಹಿರೇಮಠ, ರಾಜೇಶ ಮುನ್ನೋಳಿ, ಸಹಕಾರ ಮಹಾಮಂಡಳ ರಾಜ್ಯ ನಿರ್ದೇಶಕ ಬಿ.ಎಸ್.ಸುಲ್ತಾನಪುರಿ, ದುರದುಂಡಿ ಪಾಟೀಲ, ಸುನೀಲ ನೇರ್ಲಿ, ಕಲಗೌಡ ಪಾಟೀಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts