ಸಲಿಂಗ ಕಿರುಕುಳ : ಇಬ್ಬರ ವಿರುದ್ಧ ಪೋಕ್ಸೋ ಕೇಸ್

POCSO-Act-1
Published on

ಕಾಸರಗೋಡು: ಜಲಪಾತ ತೋರಿಸುವುದಾಗಿ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದು, ಅವರಿಗೆ ಸಲಿಂಗ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ನೆಕ್ರಾಜೆ ನಿವಾಸಿ ರಾಶಿದ್ ಸೇರಿದಂತೆ ಇಬ್ಬರ ವಿರುದ್ಧ ಬದಿಯಡ್ಕ ಠಾಣೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಠಾಣೆ ವ್ಯಾಪ್ತಿಯ 12ರ ಹರೆಯದ ಬಾಲಕನ ದೂರಿನನ್ವಯ ಈ ಕೇಸು ದಾಖಲಾಗಿದೆ. ಒಟ್ಟು ಮೂರು ಮಂದಿ ವಿದ್ಯಾರ್ಥಿಗಳನ್ನು ಜಲಪಾತ ತೋರಿಸುವ ಭರವಸೆಯೊಂದಿಗೆ ಕಾಡಿಗೆ ಕರೆದೊಯ್ದು ಅಲ್ಲಿ ಸಲಿಂಗ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net