ಪಂಚ ಗ್ಯಾರಂಟಿ ತಲುಪಿಸಲು ಪ್ರಾಮಾಣಿಕ ಪ್ರಯತ್ನ: ಸುಧೀರ್ ಕುಮಾರ್ ಶೆಟ್ಟಿ ಹೇಳಿಕೆ

Kdb_five Guarantee
Published on

ಕಡಬ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪ್ರತಿಯೊಂದು ಮನೆಗೂ ತಲುಪಬೇಕು ಎಂಬ ಉದ್ದೇಶ ಇಟ್ಟುಕೊಂಡು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ತಾಲೂಕಿನ ಪ್ರತಿ ಗ್ರಾಪಂನಲ್ಲಿ ಶಿಬಿರ ಆಯೋಜಿಸುವ ಮೂಲಕ ಸಮಿತಿ ಕಾರ್ಯಪ್ರವೃತ್ತವಾಗಿದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳ ಕಾರಣ ಯೋಜನೆಗಳಿಂದ ವಂಚಿತರಾಗಿರುವವರು ತಮ್ಮ ಪೂರಕ ದಾಖಲೆಗಳನ್ನು ಇಲಾಖೆಗಳಿಗೆ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದರು.

ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಕಾಣಿಯೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಾಣಿಯೂರು, ಬೆಳಂದೂರು ಹಾಗೂ ಸವಣೂರು ಗ್ರಾಪಂ ವ್ಯಾಪ್ತಿಗೆ ಒಳಪಟ್ಟ ಪಂಚಗ್ಯಾರಂಟಿ ಯೋಜನೆ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಹಾಗೂ ಗ್ಯಾರಂಟಿ ಅಹವಾಲು ಸಭೆಯಲ್ಲಿ ಮಾತನಾಡಿದರು.

ಕಾಣಿಯೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಉದ್ಘಾಟಿಸಿದರು. ಬೆಳಂದೂರು ಗ್ರಾಪಂ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸವಣೂರು ಗ್ರಾಪಂ ಅಧ್ಯಕ್ಷೆ ಸುಂದರಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ವಕೀಲ ಅವಿನಾಶ್ ಬೈತಡ್ಕ, ಉಷಾ ಅಂಚನ್, ಗೌರಿ ಕಾರ್ಲಾಡಿ, ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಪಿ.ಪಿ ವರ್ಗೀಸ್, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಡಬ ತಾಲೂಕು ಪಂಚಗ್ಯಾರಂಟಿ ಯೋಜನೆ ಸದಸ್ಯರಾದ ರಾಘವೇಂದ್ರ ದೈಪಿಲ, ಹರಿಣಾಕ್ಷಿ ಬನಾರಿ, ಭವಾನಿಶಂಕರ್, ಸತೀಶ್, ಎ.ಕೆ ಬಶೀರ್, ಸೈಮನ್ ಸಿ.ಜೆ, ಮಾಧವ ಪ್ರಜಾರಿ, ಹನೀಫ್ ಕಡಬ, ದೀಕ್ಷಿತ್, ಗಂಗಾಧರ ಶೆಟ್ಟಿ, ಜಗದೀಶ್, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಮಂಗಳ, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಹಾರ ಶಿರಸ್ತೇದಾರ ಶಂಕರ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಮಂಜಪ್ಪ, ಕೆಎಸ್‌ಆರ್‌ಟಿಸಿ ಅಧಿಕಾರಿ ಪುಂಡರೀಕ ಉಪಸ್ಥಿತರಿದ್ದರು. ಕಡಬ ತಾಪಂ ಸಹಾಯಕ ನಿರ್ದೇಶಕ ಸಂದೇಶ್ ಕೆ.ಎನ್ ಪ್ರಸ್ತಾವಿಸಿದರು. ಕಾಣಿಯೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ರಘು ಬಿ.ಎನ್ ಸ್ವಾಗತಿಸಿದರು. ಸವಣೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ ವಂದಿಸಿದರು. ಅನುಷ್ಠಾನ ಸಮಿತಿ ನೋಡೆಲ್ ಅಧಿಕಾರಿ ಭರತ್ ರಾಜ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net