17.8 C
Bengaluru
Wednesday, January 22, 2020

ಹನಿಟ್ರ್ಯಾಪ್​ ಪ್ರಕರಣ, ಐವರು ಬಂಧನ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ವಿಜಯಪುರ: ಬಂಗಾರ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್​ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟು 15 ಲಕ್ಷ ರೂ. ಪಡೆದಿದ್ದ ಮಹಿಳೆ ಸೇರಿ ಐವರು ಶನಿವಾರ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ವಿಜಯಪುರ ನಿವಾಸಿ ದಾನಮ್ಮ ಮಹಾಂತೇಶ ಹಿರೇಮಠ (35), ಸುಧೀರ ವಿವೇಕಾನಂದ ಘಟ್ಟನ್ನವರ, ಬಬಲೇಶ್ವರ ನಿವಾಸಿ ರವಿ ಸಿದ್ರಾಮ ಕಾರಜೋಳ, ಬೊಮ್ಮನಳ್ಳಿಯ ಮಲ್ಲಿಕಾರ್ಜುನ ಚನ್ನಪ್ಪ ಮುರಗುಂಡಿ, ಸಿಂದಗಿಯ ಶ್ರೀಕಾಂತ ಸೋಮಜಾಳ ಬಂಧಿತರು.

ಘಟನೆ ಹಿನ್ನೆಲೆ

ಬಂಗಾರ ಅಂಗಡಿಗೆ ತೆರಳಿ ನಕಲಿ ಚಿನ್ನವನ್ನು ನೀಡಿ ಅದರ ಬದಲು ಉಂಗುರ ಕೊಡುವಂತೆ ಮಹಿಳೆ ಮಾಲೀಕನಿಗೆ ಕೇಳಿದ್ದಾಳೆ. ನಂತರ ಅಂಗಡಿ ಮಾಲೀಕ ಮಹಿಳೆಗೆ ಕರೆ ಮಾಡಿ ನೀವು ನೀಡಿರುವ ಚಿನ್ನ ನಕಲಿ ಇದೆ ಎಂದು ಹೇಳಿದ್ದಾನೆ. ಅದಕ್ಕೆ ಮಹಿಳೆ ತನ್ನ ಮನೆಗೆ ಬನ್ನಿ, ಅದೇನಿದೆ ನೋಡೋಣ ಎಂದು ನಗರದ ಕಬಾಡೆ ಕಾಲನಿಯಲ್ಲಿರುವ ತನ್ನ ಮನೆಗೆ ಕರೆಸಿಕೊಂಡಿದ್ದಾಳೆ. ಮಾಲೀಕ ಮಹಿಳೆ ಮನೆಗೆ ಹೋದಾಗ ಅಲ್ಲಿದ್ದ ನಾಲ್ವರು ವ್ಯಕ್ತಿಗಳು ಆತನನ್ನು ಹೊಡೆದು ಬಟ್ಟೆ ಬಿಚ್ಚಿಸಿ ಮಹಿಳೆಯೊಂದಿಗಿದ್ದ ೆಟೋ ಸೆರೆ ಹಿಡಿದಿದ್ದಾರೆ. ಮಾಲೀಕನ ಬಳಿ ಇದ್ದ 6 ಗ್ರಾಂ ಚಿನ್ನದ ಉಂಗುರ, 9 ಸಾವಿರ ರೂ. ನಗದು, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಕಿತ್ತುಕೊಂಡು 25 ಲಕ್ಷ ರೂ. ನೀಡುವಂತೆ ಮಹಿಳೆ ಸೇರಿ ನಾಲ್ವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅವರ ಮಾತಿಗೆ ಒಪ್ಪಿದ ಅಂಗಡಿ ಮಾಲೀಕ ಆರಂಭದಲ್ಲಿ 15,31,000 ರೂ. ನೀಡಿದ್ದಾನೆ. ಕೆಲ ದಿನಗಳ ಬಿಟ್ಟು ಇನ್ನುಳಿದ 10 ಲಕ್ಷ ರೂ. ನೀಡುವಂತೆ ಪೀಡಿಸಿದ್ದಾರೆ. ಇದರಿಂದ ಬೇಸತ್ತ ಅಂಗಡಿ ಮಾಲೀಕ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಜಾಲ ಬೀಸಿ ಐವರನ್ನು ಬಂಧಿಸಿದ್ದಾರೆ.

ಇನ್ನಷ್ಟು ಪ್ರಕರಣ ಬೆಳಕಿಗೆ ಬರುವ ಶಂಕೆ

ಒಂದು ಗುಂಪು ವ್ಯವಸ್ಥಿತವಾಗಿ ಹನಿಟ್ರಾೃಪ್‌ಗೆ ಇಳಿದಿದ್ದು, ಇದೇ ತಂಡ ಬೇರೆ ವ್ಯಕ್ತಿಗಳಿಗೂ ಹನಿಟ್ರಾೃಪ್ ಮಾಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಮ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಶಂಕೆ ವ್ಯಕ್ತಪಡಿಸಿದರು.
ಬಂಧಿತ ಮಹಿಳೆಗೆ ಎರಡನೇ ಮದುವೆಯಾಗಿದ್ದು, ಇದೇ ಮೊದಲ ಬಾರಿಗೆ ಹನಿಟ್ರಾೃಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಡಿಎಸ್‌ಪಿ ಲಕ್ಷ್ಮಿನಾರಾಯಣ ಮಾರ್ಗದರ್ಶನದಲ್ಲಿ ವಿಜಯಪುರ ಗ್ರಾಮೀಣ ವೃತ್ತದ ಸಿಪಿಐ ಎಂ.ಕೆ.ಧಾಮಣ್ಣವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಬಂಧಿತ ವ್ಯಕ್ತಿಗಳಿಂದ ಕಾರು, ಸ್ಕೂಟಿ ಹಾಗೂ 15 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...