ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹ

blank

ಹೊನ್ನಾಳಿ: ಹೊನ್ನಾಳಿಯಲ್ಲಿ ಕೂಡ ಕರ್ನಾಟಕ ಬಂದ್ ಪ್ರತಿಭಟನೆ ಸೀಮಿತವಾಯಿತು. ಸಾರ್ವಜನಿಕರು ಬಂದ್​ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಬಸ್​ಗಳು ಎಂದಿನಂತೆ ಸಂಚರಿಸಿದವು. ಆಟೊಗಳು ಬೀದಿಗಳಿದಿದ್ದವು. ಅಂಗಡಿ, ಮುಂಗಟ್ಟುಗಳು ತೆರೆದಿದ್ದವು.

blank

ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ಸಂಗೊಳ್ಳಿರಾಯಣ್ಣ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ಎಂಇಎಸ್ ವಿರುದ್ಧ ಘೊಷಣೆ ಕೂಗಲಾಯಿತು.

ಕೆಆರ್​ಟಿಸಿ ಬಸ್ ನಿರ್ವಾಹಕರ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಿದ್ದನ್ನು ಖಂಡಿಸಿದ ಪ್ರತಿಭಟನಾಕಾರರು ಭಾಷಾ ಸಾಮರಸ್ಯ ಹಾಳು ಮಾಡುತ್ತಿರುವ ಎಂಇಎಸ್, ಶಿವಸೇನೆ ನಿಷೇಧಿಸಲು ಆಗ್ರಹಿಸಿ ತಹಸೀಲ್ದಾರ್ ಪಟ್ಟರಾಜಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.

ಬೆಳಗಾವಿಯಲ್ಲಿ ಕನ್ನಡಿಗರು ಎಷ್ಟೇ ಅವಮಾನ ಅನುಭವಿಸುತ್ತಿದ್ದರೂ ಎಲ್ಲ ಪಕ್ಷದ ಜನಪ್ರತಿನಿಧಿಗಳು ಕನ್ನಡಿಗರಿಗೆ ಬೆಂಬಲ ವ್ಯಕ್ತಪಡಿಸದೆ ಮೌನವಾಗಿದ್ದಾರೆ. ಇದಕ್ಕೆ ಕಾರಣ ಮರಾಠಿಗರ ಮತ ಬ್ಯಾಂಕ್ ಎಂದು ಟೀಕಿಸಿದರು.

ಕನ್ನಡಿಗರ ಮೇಲೆ ದೌರ್ಜನ್ಯ ಎಸಗುವ, ಸಾರಿಗೆ ಬಸ್​ಗಳಿಗೆ ಕಲ್ಲು ಎಸೆಯುವ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಬೆಳಗಾವಿಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.

ಸಂಘಟನೆ ಪ್ರಮುಖರಾದ ಅಣ್ಣಪ್ಪ, ಸೋಮೇಶ್ವರಯ್ಯ, ಸುಜಯ್, ಡಿ. ಮಧು, ಬಸವರಾಜ್, ಆಂಜನೇಯ, ಸುನಿಲ್, ಯಶ ವಂತ್, ಪ್ರಮೋದ್, ಅಭಿ, ಮಂಜು ಹಾಗೂ ಅನೇಕ ಕಾರ್ಯಕರ್ತರಿದ್ದರು.

Share This Article

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…