More

    ಹೊನ್ನಾಳಿ ಸರ್ಕಾರಿ ಕಾಲೇಜಿನಲ್ಲಿ ಶೌಚಗೃಹ ಸಮಸ್ಯೆ: ತಹಸೀಲ್ದಾರ್ ಬಳಿ ಅಳಲು ತೋಡಿಕೊಂಡ ವಿದ್ಯಾರ್ಥಿಗಳು

    ಹೊನ್ನಾಳಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರಶ್ಮಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ವೇದಿಕೆ ಅಧ್ಯಕ್ಷ ಪ್ರದೀಪ್ ಮಾತನಾಡಿ, ಹಲವು ವರ್ಷಗಳಿಂದ ಕಾಲೇಜಿನಲ್ಲಿ ಮೂಲ ಸೌಕರ್ಯ ಸಮಸ್ಯೆ ಇದೆ. ಕನಿಷ್ಠ ಶೌಚಗೃಹ, ಕುಡಿಯುವ ನೀರಿನ ಸೌಕರ್ಯವಿಲ್ಲ ಎಂದು ದೂರಿದರು.

    800 ವಿದ್ಯಾರ್ಥಿಗಳಿರುವ ಈ ಕಾಲೇಜಿನಲ್ಲಿ ಕುಳಿತುಕೊಳ್ಳಲು ಸಮರ್ಪಕ ಡೆಸ್ಕ್ ಇಲ್ಲ. ಕೆಲ ಕೊಠಡಿಗಳು ಸೋರುತ್ತಿವೆ. ಮಳೆಗಾಲದಲ್ಲಿ ಪಾಠ ಕೇಳಲಿಕ್ಕೆ ಸಾಧ್ಯವಾಗುತ್ತಿಲ್ಲ. ಕಳೆದ 20 ದಿನಗಳಿಂದ ಸತತವಾಗಿ ಸುರಿದ ಮಳೆಯಿಂದ ಹಳೇ ಕೊಠಡಿಗಳು ಶಿಥೀಲಗೊಂಡಿವೆ. ಆದ್ದರಿಂದ ಕೂಡಲೇ ಕೊಠಡಿಗಳ ದುರಸ್ತಿ ಕಾರ್ಯಕೈಗೊಂಡು ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್, ನಿಮ್ಮ ಮನವಿಯನ್ನು ಶಿಕ್ಷಣ ಇಲಾಖೆಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ನಗರಘಟಕದ ಅಧ್ಯಕ್ಷ ಅಪ್ಪು, ಉಪಾಧ್ಯಕ್ಷ ಅಣ್ಣಪ್ಪ, ಶಂಕರ್, ಪ್ರತಾಪ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts