More

    ಪರಸ್ಪರ ಅಂತರ ಕಾಯ್ದುಕೊಂಡು ಕೆಲಸ ಮಾಡಿ

    ಹೊನ್ನಾಳಿ: ನರೇಗಾ ಕಾಮಗಾರಿಯಲ್ಲಿ ಪಾಲ್ಗೊಳ್ಳುವ ಕಾರ್ಮಿಕರು ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ್ ಮನವಿ ಮಾಡಿದರು.

    ತಾಲೂಕಿನ ಕತ್ತಿಗೆ ಗ್ರಾಮದ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.

    ದುಡಿಯುವ ಕೈಗಳಿಗೆ ಕೆಲಸ ಕೊಡಲು ಸರ್ಕಾರ ನರೇಗಾ ಕಾಮಗಾರಿಗೆ ಅವಕಾಶ ನೀಡಿದೆ. ಜನರು ಪರಸ್ಪರ ಅಂತರ ಕಾಯ್ದುಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು. ಶುದ್ಧ ಕುಡಿಯುವ ನೀರು, ಕೈತೊಳೆಯಲು ಸ್ಯಾನಿಟೈಸರ್ ಇಡಬೇಕು. ಮಾಸ್ಕ್ ವಿತರಿಸುವಂತೆ ಪಿಡಿಒಗೆ ಸೂಚಿಸಿದರು.

    ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಹಂತ ಹಂತವಾಗಿ ನರೇಗಾ ಕಾಮಗಾರಿ ಪ್ರಾರಂಭಿಸಲಾಗುವುದು. ಈಗಾಗಲೇ ತಾಲೂಕಿನ 7 ಗ್ರಾಪಂ ವ್ಯಾಪ್ತಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. 10 ಕೃಷಿ ಹೊಂಡ, 20 ಬದು ನಿರ್ಮಾಣ ಕಾಮಗಾರಿ ನಡೆಯುತ್ತಿವೆ. 768 ಕಾರ್ಮಿಕರು ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು.

    ತಾಪಂ ಇಒ ಗಂಗಾಧರಮೂರ್ತಿ, ಜಿಲ್ಲಾ ಸಂಯೋಜಕರಾದ ಜಯಪ್ರಕಾಶ್, ಚಂದನ್, ಭೋಜರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts