More

    ಸಾರ್ವಜನಿಕರಿಗೆ ಸಕಾಲದಲ್ಲಿ ಕೆಲಸ ಮಾಡಿಕೊಡಿ

    ಹೊನ್ನಾಳಿ: ರೈತರು, ಸಾರ್ವಜನಿಕರಿಗೆ ಸಕಾಲದಲ್ಲಿ ಕೆಲಸ, ಕಾರ್ಯ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ವೆಂಕಟೇಶ್ ಹೇಳಿದರು.
    ತಾಲೂಕು ಕಚೇರಿಯಲ್ಲಿ ಬುಧವಾರ ಸಂಜೆ ಪಹಣಿ ತಿದ್ದುಪಡಿ ಆಂದೋಲನದಲ್ಲಿ ಮಾತನಾಡಿದರು.

    ರೈತರು, ಜನರ ಅನುಕೂಲಕ್ಕಾಗಿ ಸ್ಥಳದಲ್ಲೇ ಪಹಣಿ ದೋಷ ತಿದ್ದುಪಡಿ ವಿಶೇಷ ಆಂದೋಲನ ಕೈಗೊಂಡಿದ್ದು, ಸಮಸ್ಯೆಗಳು ಏನೇ ಇದ್ದರೂ ಬಗೆಹರಿಸಿಕೊಳ್ಳಬಹುದು. ರೈತರು ಇಂತಹ ಅವಕಾಶಗಳನ್ನು ದೊರೆದಾಗ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ತಾಲೂಕಾದ್ಯಂತ ರೈತರು, ಸಾರ್ವಜನಿಕರು ಕೆಲಸ ಕಾರ್ಯಗಳನ್ನು ಬಿಟ್ಟು ತಾಲೂಕು ಕಚೇರಿಗೆ ಬರುತ್ತಾರೆ. ಅವರನ್ನು ಅಲೆದಾಡಿಸದೆ, ಕೆಲಸಗಳನ್ನು ಕೂಡಲೆ ಮಾಡಿಕೊಡಬೇಕು ಎಂದು ತಹಸೀಲ್ದಾರ್, ಸಿಬ್ಬಂದಿಗೆ ಸೂಚಿಸಿದರು.

    ಪಹಣಿಯಲ್ಲಿ ಹೆಸರು ತಪ್ಪಾಗಿರುವುದು, ವಿಸ್ತೀರ್ಣ ವ್ಯತಾಸ ಮತ್ತಿತರ ಲೋಪ- ದೋಷಗಳನ್ನು ಸರಿಪಡಿಸಲಾಗುವುದು. ಇಂತಹ 767 ಅರ್ಜಿಗಳಲ್ಲಿ 172 ದೂರುಗಳನ್ನು ಸರಿಪಡಿಸಲಾಗಿದೆ. ಉಳಿದವುಗಳನ್ನು ಶೀಘ್ರವೇ ಇತ್ಯರ್ಥಪಡಿಸಲಾಗುವುದು ಎಂದರು.

    ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮಾತನಾಡಿ, ರೈತರು, ಸಾರ್ವಜನಿಕರ ಅನುಕೂಲಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ, ಕಾರ್ಯಗಳನ್ನು ಮಾಡಿಕೊಟ್ಟು ಜನರಿಗೆ ನೆರವಾಗಬೇಕು ಎಂದರು.

    ತಾಲೂಕು ಕಚೇರಿಗೆ ಆಗಮಿಸುವ ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಸ್ಥಳದಲ್ಲೇ ಪರಿಹರಿಸುವಂತೆ ಎಸಿ, ತಹಸೀಲ್ದಾರ್ ಅವರಿಗೆ ಸೂಚಿಸಿದರು.

    ತಹಸೀಲ್ದಾರ್ ತಿರುಪತಿ ಪಾಟೀಲ್, ಗ್ರೇಡ್ 2 ತಹಸೀಲ್ದಾರ್ ಸುರೇಶ್, ಉಪ ತಹಸೀಲ್ದಾರ್ ಮಂಜುನಾಥ್ ಇಂಗಳಗೊಂದಿ, ಕಂದಾಯಾಧಿಕಾರಿಗಳಾದ ಗುರುಪ್ರಸಾದ್, ರವಿಕುಮಾರ್, ರಮೇಶ್, ದಿನೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts