25.5 C
Bangalore
Monday, December 16, 2019

ಹೊಲಗದ್ದೆಗಳು ಜಲಾವೃತ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಹೊನ್ನಾಳಿ: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮಲೆನಾಡು ಅಚ್ಚುಕಟ್ಟು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ತುಂಗಭದ್ರಾ ನದಿ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ ಅಪಾಯದ ಹಂತಕ್ಕೆ ತಲುಪಿದ್ದು, 11.250 ಮೀಟರ್‌ಗೆ ಏರಿದೆ.

- Advertisement -

ಅಗ್ರಹಾರದ ಸರ್ ಎಂ.ವಿ.ಪ್ರಾಥಮಿಕ ಶಾಲೆ, ಬಾಲರಾಜ್ ಘಾಟ್ ಕೇರಿಯ 8 ಮನೆಗಳಿಗೆ ನೀರು ನುಗ್ಗಿದೆ.

ನದಿ ಮಟ್ಟ ಇದೇ ರೀತಿ ಹೆಚ್ಚಿದರೆ ಮೇದಾರ ಕೇರಿಗೆ ನೀರು ನುಗ್ಗುವ ಸಂಭವವುಂಟು. ಈಗಾಗಲೇ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಬಾಲರಾಜ್‌ಗಾಟ್ ಕೇರಿಯ ನದಿ ದಂಡೆಯ ಮೇಲಿದ್ದ ಮನೆಗಳ ಕುಟುಂಬ ಸದಸ್ಯರನ್ನು ಅಂಬೇಡ್ಕರ್ ಭವನಕ್ಕೆ ಕಳೆದ 3 ದಿನಗಳ ಹಿಂದೆ ಸ್ಥಳಾಂತರಿಸಿದ್ದು, ನೆರೆ ಸಂತಸ್ತರಿಗೆ ಆಹಾರ ವ್ಯವಸ್ಥೆ ಮಾಡಲಾಗಿದೆ.

ತಾಲೂಕಿನಲ್ಲಿ ಗುರುವಾರ ಮಧ್ಯರಾತ್ರಿಯಿಂದ ಬೆಳಗ್ಗೆ 7.30ರ ವರೆಗೆ ಬಿರುಸಿನ ಮಳೆ ಸುರಿಯಿತು. ತ್ಯಾಗದಕಟ್ಟೆ ಮತ್ತು ಚನ್ನೇನಹಳ್ಳಿ ಗ್ರಾಮಗಳಲ್ಲಿ ತಲಾ 2 ಮನೆಗಳು, ಹೊನ್ನಾಳಿ ಪಟ್ಟಣ, ಎಸ್.ಮಲ್ಲಾಪುರ, ಎಚ್.ಗೋಪಗೊಂಡನಹಳ್ಳಿ ಗ್ರಾಮಗಳಲ್ಲಿ ತಲಾ ಒಂದು ಮನೆ ಹಾಗೂ ನ್ಯಾಮತಿ ತಾಲೂಕಿನ ಟಿ.ಜಿ.ಹಳ್ಳಿ, ಆರುಂಡಿ, ಮಲ್ಲಿಗೇನಹಳ್ಳಿ, ದೊಡ್ಡೇತ್ತನಹಳ್ಳಿ ತಲಾ ಒಂದು ಮನೆ ಹಾಗೂ ಗಂಗನಹಳ್ಳಿ ತಾಂಡಾದಲ್ಲಿ ಎರಡು ಸೇರಿ 13 ಮನೆಗಳು ಕುಸಿದಿವೆ ಎಂದು ತಾಲೂಕು ಆಡಳಿತ ಮಾಹಿತಿ ನೀಡಿದೆ.

ಜಮೀನುಗಳಿಗೆ ನುಗ್ಗಿದ ನದಿ ನೀರು: ತುಂಗಭದ್ರಾ ನದಿ ನೀರಿನ ಮಟ್ಟ ವ್ಯಾಪಕವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಕುಳಗಟ್ಟೆ, ಸಾಸ್ವೆಹಳ್ಳಿ, ಬೆನಕನಹಳ್ಳಿ, ಕ್ಯಾಸಿನಕೇರಿ ಸೇರಿ ನದಿಪಾತ್ರದ 10ಕ್ಕೂ ಅಧಿಕ ಗ್ರಾಮಗಳ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಇದರಿಂದ ಬೆಳೆಗಳಿಗೆ ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಮುಂದಿನ ದಿನಗಳಲ್ಲಿ ಅಂದಾಜು ಮಾಡಲಾಗುವುದು ಎಂದು ತಾಲೂಕು ಆಡಳಿತ ತಿಳಿಸಿದೆ.

ತಾಲೂಕು ಆಡಳಿತ ಗಸ್ತು: ತಾಲೂಕು ಆಡಳಿತ ಹಾಗೂ ಪಪಂ ಸಿಬ್ಬಂದಿ ಗುರುವಾರ ರಾತ್ರಿ ತಹಸೀಲ್ದಾರ್ ತುಷಾರ್ ಬಿ.ಹೊಸೂರ್, ಪಪಂ ಮುಖ್ಯಾಧಿಕಾರಿ ವೀರಭದ್ರಯ್ಯ ನೇತೃತ್ವ ಅಧಿಕಾರಿಗಳ ತಂಡ ಮುಂಜಾಗ್ರತ ಕ್ರಮವಾಗಿ ನದಿಪಾತ್ರವನ್ನು ಗಸ್ತು ವ್ಯವಸ್ಥೆ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಮಳೆಯಾಗಿದ್ದು, ಬೆಳಗುತ್ತಿ ಹೋಬಳಿಯಲ್ಲಿ 66 ಮಿ.ಮೀ., ಹೊನ್ನಾಳಿ ತಾಲೂಕು ಸಾಸ್ವೆಹಳಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು 36.4 ಮಿ.ಮೀ. ಮಳೆ ಸುರಿದಿದೆ.

ಉಕ್ಕಿ ಹರಿಯುತ್ತಿರುವ ತಂಗಭದ್ರೆ: ತುಂಗಭದ್ರಾ ನದಿ ತುಂಬಿ ಉಕ್ಕಿ ಹರಿಯುತ್ತಿದ್ದು, ಇದನ್ನು ನೂಡುವುದು ಒಂದು ಪುಣ್ಯದ ಕಾರ್ಯವೆಂದು ಜನತೆ ತಂಡೋಪತಂಡವಾಗಿ ನದಿ ದಂಡೆಗೆ ಬರುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಇದುವರೆಗೂ ಯಾವುದೇ ಸಾವು, ನೋವಿನ ಬಗ್ಗೆ ವರದಿ ಆಗಿಲ್ಲ.

ಹೊನ್ನಾಳಿ ತಾಲೂಕು ಮಳೆ ವಿವರ: ಹೊನ್ನಾಳಿ-32.2ಮಿ.ಮೀ., ಸೌಳಂಗ-63-8, ಬೆಳಗುತ್ತಿ-66, ಹರಳಹಳ್ಳಿ-27.6, ಗೋವಿನಕೋವಿ-28.8, ಕುಂದೂರು-26.6, ಸಾಸ್ವೆಹಳ್ಳಿ-36.4, ಸರಾಸರಿ 36.4 ಮಿ.ಮೀ. ಮಳೆ ದಾಖಲಾಗಿದೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...