18.5 C
Bangalore
Monday, December 16, 2019

ನದಿ ತೀರಕ್ಕೆ ಮಕ್ಕಳು ಶೌಚಕ್ಕೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಹೊನ್ನಾಳಿ: ಪಟ್ಟಣದ ಅಗ್ರಹಾರ ಬಳಿ ಇರುವ ಸ್ವಾಮಿ ವಿವೇಕಾನಂದ ಶಾಲೆ ವಿದ್ಯಾರ್ಥಿಗಳು ಶೌಚಕ್ಕೆಂದು ಸಮೀಪದ ನದಿ ತೀರಕ್ಕೆ ಹೋಗುತ್ತಾರೆ. ಆದರೂ ಸಂಬಂಧಪಟ್ಟವರು ಕಣ್ಮುಚ್ಚಿ ಕುಳಿತಿದ್ದಾರೆಂದು ತಾಪಂ ಉಪಾಧ್ಯಕ್ಷ ರವಿಕುಮಾರ್ ಹಾಗೂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪೇಶ್ ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸಾಮರ್ಥ್ಯಸೌಧದಲ್ಲಿ ಗುರುವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಆಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ಈವರೆವಿಗೂ ಆ ಶಾಲೆ ಆಡಳಿತ ಮಂಡಳಿಗೆ ನೊಟೀಸ್ ಜಾರಿ ಮಾಡಿಲ್ಲ. ಶಿಕ್ಷಣ ಸಂಸ್ಥೆ ತೆರೆಯುವ ಸಂದರ್ಭದಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಗೃಹ ಇರಬೇಕು. ಮಕ್ಕಳ ಸಂಖ್ಯೆ ಹೆಚ್ಚಿದಂತೆಲ್ಲ ಮೂಲ ಸೌಲಭ್ಯ ಹೆಚ್ಚಾಗಬೇಕು. ತಕ್ಷಣ ಶಿಕ್ಷಣ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ಶಾಲೆಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನದಿ ತೀರಕ್ಕೆ ಶೌಚಕ್ಕೆ ಹೋಗುವುದರಿಂದ ಅನೈರ್ಮಲ್ಯ ಜತೆಗೆ ಮಕ್ಕಳ ಜೀವಕ್ಕೂ ಕುತ್ತು ಬರಬಹುದು ಎಂದು ಎಚ್ಚರಿಸಿದರು.

ಪ್ರತಿಕ್ರಿಯಿಸಿದ ಇಸಿಒ ಮುದ್ದನಗೌಡ, ತಕ್ಷಣ ಶಾಲೆ ಆಡಳಿತ ಮಂಡಳಿಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಾಗುವುದು. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಜಿ.ಶಂಕರ್ ಮಾತನಾಡಿ, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ 14028 ಎಕರೆ ತೋಟಗಾರಿಕೆ ಬೆಳೆಗಳಲ್ಲಿ 1340 ಎಕರೆ ಅಡಿಕೆ, 150 ಎಕರೆ ತೆಂಗು, 95 ಎಕರೆ ವಿಳ್ಯೆದೆಲೆ, ಬಾಳೆ 45 ಎಕರೆ ಹಾನಿಗೀಡಾಗಿದೆ ಎಂದು ಮಾಹಿತಿ ನೀಡಿದರು.

ಅವಳಿ ತಾಲೂಕಿನ ರೈತರು ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅವಕಾಶವಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಪಂ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಇಒ ಗಂಗಾಧರಮೂರ್ತಿ, ಸದಸ್ಯರಾದ ವಿಜಯಕುಮಾರ್, ಅಬೀದ್ ಆಲಿಖಾನ್, ಪೀರ್ಯಾನಾಯ್ಕ ಸುಲೋಚನಮ್ಮ ಪಾಲಾಕ್ಷಪ್ಪ, ರೇಖಾ ಉಮೇಶ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇ.15ರಷ್ಟು ಹೆಚ್ಚು ಮಳೆಯಾಗಿದೆ. ಮೆಕ್ಕೆಜೋಳ ಬಿತ್ತಿರುವ ರೈತರು ಹೆಚ್ಚು ಸಾರಜನಕ ಬಳಕೆ ಮಾಡಬಾರದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಿರಿ ಧಾನ್ಯ ಯೋಜನೆಯಲ್ಲಿ ಉದ್ದು, ನವಣೆ ಇತರ ಬೆಳೆಗಳಿಗೆ ಹೆಕ್ಟೇರ್‌ಗೆ 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯನ್ನು ಪಡೆಯಲು ಫಲಾನುಭವಿಗಳು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ತಿಳಿಸಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...