ಮಲ್ಲಿಕಾರ್ಜುನ ದೇವಳದಲ್ಲಿ ಕಾರ್ಯಾಧ್ಯಕ್ಷಗೆ ಸನ್ಮಾನ

Ksd_Honor
Published on

ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರುಗಿದ ಕೋಟಿ ಪಂಚಾಕ್ಷರಿ ಜಪಯಜ್ಞ, ಶ್ರೀಚಕ್ರ ಪೂಜೆ ಕಾರ್ಯಕ್ರಮದ ಸಮಾರೋಪದಲ್ಲಿ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಅವರನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಉಡುಪಿ ಶಿರೂರು ಮಠದಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಶಬರಿಮಲೆ ಹರಿವರಾಸನಂ ಪ್ರಶಸ್ತಿ ಪುರಸ್ಕೃತ ಕಲೈಮಾಮಣಿ ವೀರಮಣಿ ರಾಜು, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಗೋವಿಂದನ್ ನಾಯರ್, ಕ್ಷೇತ್ರ ತಂತ್ರಿವರ್ಯ ಧನ್ವಿನ್ ಪದ್ಮನಾಭ ತಂತ್ರಿ, ಯಜ್ಞ ಸಮಿತಿ ಅಧ್ಯಕ್ಷ ಡಾ.ಅನಂತ ಕಾಮತ್, ಕಾರ್ಯಾಧ್ಯಕ್ಷ ರಾಮ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್., ಪಿ.ರಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್, ಮಹಿಳಾ ಸಮಿತಿ ಶಾರದಾ, ಉಷಾ ಅರ್ಜುನ್, ನಗರ ಸಭಾ ಸದಸ್ಯೆ ಶ್ರೀಲತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net