ಸಾಧಕ ವಿದ್ಯಾರ್ಥಿನಿಗೆ ಸನ್ಮಾನ

student
ಪ್ರತೀಕ್ಷಾರ ಅವರನ್ನು ಪ್ರಾಂಶುಪಾಲ ಸಂತೋಷ್ ಸನ್ಮಾನಿಸಿದರು
Published on

ಬೆಳ್ತಂಗಡಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್‌ನಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನ ಹಳೇ ವಿದ್ಯಾರ್ಥಿನಿ ಪ್ರತೀಕ್ಷಾರನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಪ್ರಾಂಶುಪಾಲ ಸಂತೋಷ್ ಮತ್ತು ಎಲ್ಲ ವಿಭಾಗಗಳ ವಿಭಾಗ ಮುಖ್ಯಸ್ಥರು, ಪ್ರತೀಕ್ಷಾ ಅವರ ತಾಯಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉದ್ಯೋಗಿ ಹೇಮಾ ಆನಂದ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net