More

    ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬಿ ಪ್ರೀತಿ ತೋರಿದ ಸಚಿವ

    ಶಿವಮೊಗ್ಗ: ಕೋವಿಡ್ -19 ದಿನೇದಿನೆ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತ ತುರ್ತು ಪರಿಸ್ಥಿತಿ ತಂದೊಡ್ಡಿರುವ ಸಂದರ್ಭದಲ್ಲೂ ಹಗಲು ರಾತ್ರಿಯೆನ್ನದೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಶಿಷ್ಟವಾಗಿ ಗೌರವ ಸಮರ್ಪಣೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆಂದೇ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉಡಿ ತುಂಬುವ ಮೂಲಕ ಅವರ ಸೇವೆ ಮುಂದುವರಿಯಲಿ ಎಂದು ಶುಭ ಕೋರಿದರು.

    ಇದನ್ನೂ ಓದಿರಿ ಕರೊನಾ ಸೋಂಕಿತ ಬಾಗಲಕೋಟೆ ಗರ್ಭಿಣಿಯ ಗರ್ಭಪಾತಕ್ಕೆ ವೈದ್ಯರು ಮುಂದಾಗಿದ್ದೇಕೆ?

    ಕರೊನಾ ಮಣಿಸುವ ಹೋರಾಟದ ಒಂದು ಪ್ರಮುಖ ಹಂತ ಜಾಗೃತಿ ಕಾರ್ಯ. ಈ ನಿಟ್ಟಿನಲ್ಲಿ ಮನೆಮನೆಗೂ ಭೇಟಿ ನೀಡುವ ಅಂಗನವಾಡಿ ಕಾರ್ಯಕರ್ತೆಯರು ಮಹಾಮಾರಿ ಸೋಂಕಿನಿಂದ ದೂರವಿರುವ, ವೈಯಕ್ತಿಕ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ, ರೋಗದ ಲಕ್ಷಣ ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಅರಿವು ಮೂಡಿಸುತ್ತಿದ್ದಾರೆ. ಇಂತಹ ಕರೊನಾ ಸೇನಾನಿಗಳಿಗೆ ಸಚಿವರು ಉಡಿ ತುಂಬುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಯತ್ನಿಸಿದ್ದಾರೆ.

    ಉಡಿ ತುಂಬುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ. ಕಾಂತೇಶ್ ಹಾಗೂ ನಗರ ಬಿಜೆಪಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಇದನ್ನೂ ಓದಿರಿVIDEO| ನಮಗೆ ಇಲ್ಲಿರಲು ಆಗುತ್ತಿಲ್ಲ, ದಯಮಾಡಿ ನಮ್ಮನ್ನು ರಕ್ಷಿಸಿ ಎಂದು ವಿದ್ಯಾರ್ಥಿನಿಯರ ಅಳಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts