More

    ಹಿರಿಯ ವಕೀಲ ಜಿಎಸ್‌ಎನ್‌ಗೆ ನಾಳೆ ಸನ್ಮಾನ

    ಶಿವಮೊಗ್ಗ: ನಗರದ ಹಿರಿಯ ವಕೀಲ ಜಿ.ಎಸ್.ನಾಗರಾಜ್ ಅವರು ವೃತ್ತಿ ಜೀವನದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಏ.6ರ ಸಂಜೆ 6ಕ್ಕೆ ಎನ್‌ಇಎಸ್ ಪ್ರೌಢಶಾಲೆ ಆವರಣದಲ್ಲಿ ವೃತ್ತಿ ಜೀವನ ಸಾರ್ಥಕತೆ-50 ಹೆಸರಿನಲ್ಲಿ ನಾಗರಾಜ್ ಅವರನ್ನು ಸನ್ಮಾನಿಸಲಾಗುತ್ತಿದೆ.

    ಜಿಲ್ಲಾ ವಕೀಲರ ಸಂಘ ಹಾಗೂ ಜಿ.ಎಸ್.ನಾಗರಾಜ ಅವರ ಕಿರಿಯ ವಕೀಲರ ಬಳಗದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಎಸ್‌ಎನ್ ಕಿರಿಯ ವಕೀಲರ ಬಳಗದ ಸದಸ್ಯ ನಾಗೇಶನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಮಾಜಿ ಸಚಿವ ಪ್ರೊ. ಬಿ.ಕೆ.ಚಂದ್ರಶೇಖರ್, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಅಧ್ಯಕ್ಷತೆ ವಹಿಸುವರು. ಹಿರಿಯ ವಕೀಲರಾದ ಎನ್.ದೇವೇಂದ್ರಪ್ಪ, ಕೆ.ಬಸಪ್ಪ ಗೌಡ, ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಉಪಸ್ಥಿತರಿರುವರು ಎಂದರು.
    1968ರಲ್ಲಿ ವಕೀಲರಾಗಿ ನೋಂದಣಿ ಮಾಡಿಕೊಂಡ ಜಿ.ಎಸ್.ನಾಗರಾಜ, ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳ ಕುರಿತು ವಾದ ಮಂಡಿಸುವಲ್ಲಿ ಖ್ಯಾತರಾಗಿದ್ದಾರೆ. ಅನೇಕ ಪ್ರಮುಖ ಪ್ರಕರಣಗಳಲ್ಲಿ ಪೊಲೀಸರ ಪರವಾಗಿಯೂ ವಾದ ಮಂಡಿಸಿದ್ದಾರೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವಾರು ಪ್ರಕರಣಗಳನ್ನು ನಿರ್ವಹಿಸಿದ್ದಾರೆ ಎಂದು ವಿವರಿಸಿದರು.
    ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ, ನಗರಸಭಾ ಸದಸ್ಯ, ಶಿವಮೊಗ್ಗ ಹಾಗೂ ಬೆಂಗಳೂರು ಹೋಟೆಲ್ ಕಾರ್ಮಿಕ ವಿಭಾಗದ ಕಾರ್ಯದರ್ಶಿ, ಎನ್‌ಇಎಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.
    ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಕಿರಿಯ ವಕೀಲರ ಬಳಗದ ಸದಸ್ಯ ದೇವೇಂದ್ರಪ್ಪ, ಅನಂತದತ್ತ, ಅಣ್ಣಪ್ಪ, ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts