ಸಾಗರ: ಊರು ಕಟ್ಟುವಲ್ಲಿ ಅನೇಕ ಮಹನೀಯರ ಶ್ರಮವಿದೆ. ಅದರಲ್ಲಿಯೂ ಸ್ಥಳೀಯವಾಗಿ ನಡೆಯುವ ಸಾಹಿತ್ಯ ಸಮ್ಮೇಳನಗಳಲ್ಲಿ ಊರಿನ ಸಾಧಕರನ್ನು ಸನ್ಮಾನಿಸುವುದು ಸತ್ಸಂಪ್ರದಾಯ ಎಂದು ಹೊಸನಗರ ಕೊಡಚಾದ್ರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಪ್ರಭಾಕರ ರಾವ್ ಹೇಳಿದರು.
ಸಾಗರದ ನಗರಸಭೆ ರಂಗಮಂದಿರದಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ಮನುಷ್ಯನಿಗೆ ತೀರ ಅಗತ್ಯ. ಎಲ್ಲವೂ ಮನುಷ್ಯನನ್ನು ಕ್ರಿಯಾಶೀಲಗೊಳಿಸುತ್ತವೆ. ಸಾಹಿತ್ಯ ಸಮ್ಮೇಳನಗಳಿಂದ ಸ್ಥಳೀಯ ಇತಿಹಾಸ, ಸಾಹಿತ್ಯ, ಸಾಧಕರ ಮೇಲೆ ಬೆಳಕು ಚೆಲ್ಲಲು ಸಾಧ್ಯವಾಗುತ್ತದೆ. ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ 10 ಸಾಧಕರನ್ನು ಸನ್ಮಾನಿಸುವ ಮೂಲಕ ಪ್ರತಿಭೆಗೆ ಪುರಸ್ಕಾರ ನೀಡಿರುವುದು ಸಂತೋಷದ ಸಂಗತಿ ಎಂದರು.
ಸಾಗರದ ಶೃಂಗೇರಿ ಶಂಕರಮಠ ಧರ್ಮದರ್ಶಿ ಅಶ್ವಿನಿಕುಮಾರ್ ಮಾತನಾಡಿ, ನಮ್ಮ ನಡುವೆ ಸಾಧನೆ ಮಾಡಿದ ಅನೇಕರಿದ್ದು, ಎಲೆಮರೆಯ ಕಾಯಿಯಂತೆ ತಮ್ಮಷ್ಟಕ್ಕೆ ತಾವು ಕೆಲಸದಲ್ಲಿ ನಿರತರಾಗಿರುತ್ತಾರೆ. ಸ್ವಸ್ಥ ಸಮಾಜಕ್ಕೆ ಎಲ್ಲ ಕ್ಷೇತ್ರಗಳೂ ಸುಸ್ಥಿರವಾಗಿ ಇರಬೇಕು. ಸಾಹಿತ್ಯ ಪರಿಷತ್ ಪ್ರತಿ ವರ್ಷ ಎಲ್ಲ ಕ್ಷೇತ್ರದವರನ್ನೂ ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷ ಅ.ರಾ.ಶ್ರೀನಿವಾಸ್ ದಂಪತಿಯನ್ನು ಸನ್ಮಾನಿಸಲಾಯಿತು. ಕಸಾಪ ತಾಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ, ಗೌರವ ಕಾರ್ಯದರ್ಶಿ ನಾರಾಯಣಮೂರ್ತಿ, ಡಾ. ಪ್ರಸನ್ನ, ಪ್ರಮುಖರಾದ ಎಸ್.ಬಿ.ಮಹಾದೇವ್, ಈಳಿ ಶ್ರೀಧರ್, ಎಲ್.ಚಂದ್ರಪ್ಪ, ಕೆ.ಸಿದ್ದಪ್ಪ, ಮಧುಮಾಲತಿ, ವೈ.ಮೋಹನ್, ಜಿ.ನಾಗೇಶ್, ಪ್ರಸನ್ನ, ವೆಂಕಟೇಶ್, ಅಭಿಜ್ಞ, ಲೋಕೇಶ್‌ಕುಮಾರ್, ಶಿವಯೋಗಿ, ಡಾ. ಅನ್ನಪೂರ್ಣಾ, ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಇತರರಿದ್ದರು.
ಸಾಧಕರನ್ನು ಗೌರವಿಸುವುದು ಒಳ್ಳೆಯ ಸಂಪ್ರದಾಯ

You Might Also Like
Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು
Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…
ಬೇಸಿಗೆಯಲ್ಲಿ ಜಿಮ್ಗೆ ಹೋಗುವ ಮೊದಲು ಸುಸ್ತಾಗುತ್ತೀದ್ರೆ ಈ ಜ್ಯೂಸ್ಗಳನ್ನು ಒಮ್ಮೆ ಟ್ರೈ ಮಾಡಿ, ದಣಿವು ದೂರವಾಗುವುದು ಖಂಡಿತ!Pre Workout Drinks
Pre Workout Drinks: ಬೇಸಿಗೆಯ ಬಿಸಿಲಿನಲ್ಲಿ ಸ್ವಲ್ಪ ದೂರ ನಡೆದರೂ ಸಹ ದೇಹವು ದಣಿಯುತ್ತದೆ, ಬಾಯಾರಿಕೆ…
ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem
Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…