ವಿಜಯವಾಣಿ ಸುದ್ದಿಜಾಲ ಕಾರ್ಕಳ
ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಯೊಂದು ಮಾಡಿರುವ ಸಾಧನೆ ರಾಷ್ಟ್ರಕ್ಕೆ ಮಾದರಿ. ಸುಧಾಕರ ಶೆಟ್ಟಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮೂಲಕ ಶಿಕ್ಷಣದ ಕ್ರಾಂತಿಗೆ ಕಾರಣಿಭೂತರಾಗಿದ್ದಾರೆ ಎಂದು ಎಂಆರ್‌ಜಿ ಗ್ರೂಪ್‌ಗಳ ಸಂಸ್ಥಾಪಕ ಡಾ.ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಅಜೆಕಾರ್ ಪದ್ಮಗೋಪಾಲ್‌ಎಜುಕೇಶನ್ ಟ್ರಸ್ಟ್ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಎಚ್ ಮಾತನಾಡಿ, ನಿರಂತರ ಓದು ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಕಲಿಕೆಯ ಅವಧಿಯಲ್ಲಿ ಸಾಧನೆ ಮಾತ್ರ ನಮ್ಮ ಗುರಿಯಾಗಬೇಕು ಎಂದರು.
ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿದರು. ಹಳೇ ವಿದ್ಯಾರ್ಥಿ ಡಾ.ಗೌತಮ್‌ಭಟ್ ಶುಭಹಾರೈಸಿದರು. 2024ನೇ ಜೆಇಇಯ ಅಡ್ವಾನ್ಸ್ ಮೂಲಕ ಐಐಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆಇಇ ಮೈನ್ಸ್ ಮೂಲಕ ಎನ್‌ಐಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂಬಿಬಿಎಸ್ ಪ್ರವೇಶಿಸಿದ 155 ವಿದ್ಯಾರ್ಥಿಗಳನ್ನು, ಸಿ.ಎ ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾದ ಹನ್ನೊಂದು ಹಳೇ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 7,47,500 ರೂ.ವಿದ್ಯಾರ್ಥಿ ವೇತನ ವಿತರಿಸಲಾಯಿತು. ಜತೆಗೆ ಭಾರತೀಯ ಸೇನೆಗೆ 3.10 ಲಕ್ಷ ರೂ. ದೇಣಿಗೆ ನೀಡಲಾಯಿತು. ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆ ವಿದ್ಯಾವಂತ ಹಾಗೂ ಸಂಸ್ಕಾರವಂತ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದೆ. ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣ ಪಡೆದು ಬದುಕಿನಲ್ಲಿ ಸಾಧಕರಾಗಿ ಹೊರಹೊಮ್ಮಬೇಕಾಗಿದೆ. ಭವಿಷ್ಯದ ಭಾರತ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ
-ವಿ.ಸುನೀಲ್‌ಕುಮಾರ್ ಶಾಸಕhttps://www.vijayavani.net/temporary-base-in-old-building