More

    ಜಿಲ್ಲೆಯಲ್ಲಿ 32 ಶಾಲೆಗೆ ನೂರರಷ್ಟು ಫಲಿತಾಂಶ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

    ಮಂಡ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ 32 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ಮೂರನೇ ಹಾಗೂ ಜಿಲ್ಲೆಯ ಮೊದಲ ಟಾಪರ್ ನವನೀತ್‌ನನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಇತರೆ ವಿದ್ಯಾರ್ಥಿಗಳಿಗೆ ಮಾದರಿ ಎಂದರು.
    ನವನೀತ್ ಅವರ ತಂದೆ ಕೃಷಿಕರಾಗಿದ್ದು, ರೈತರ ಮಕ್ಕಳು ಸಹ ಉನ್ನತ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದೇನೆ ಎಂದು ತಪ್ಪು ಗ್ರಹಿಕೆಯಿಂದ ಮದ್ದೂರು ತಾಲೂಕಿನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಬೇಸದರ ಸಂಗತಿ. ವಿದ್ಯಾರ್ಥಿಗಳು ಇಂತಹ ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಪರೀಕ್ಷೆ ಬರೆದು ಉತ್ತೀರ್ಣರಾಗಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
    ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಮಂಡ್ಯ ಜಿಲ್ಲೆ 19ನೇ ಸ್ಥಾನ ಪಡೆದುಕೊಂಡಿದ್ದು ಶೇ 74.54 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗೆ ಶೇ 71.85, ಅನುದಾನಿತ ಶಾಲೆಗೆ ಶೇ.63.27, ಖಾಸಗಿ ಶಾಲೆಗಳಿಗೆ ಶೇ.87.46 ಫಲಿತಾಂಶ ಬಂದಿದೆ. ಅನುತೀರ್ಣರಾದ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಮತ್ತೆ ಪರೀಕ್ಷೆ ಬಗ್ಗೆ ಬರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಜೂ.7ರಿಂದ ಎರಡನೇ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಡಿಡಿಪಿಐ ಶಿವರಾಮೇಗೌಡ, ಬಿಇಒ ಮಹದೇವು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ನವನೀತ್ ತಂದೆ ಚನ್ನೇಗೌಡ, ತಾಯಿ ವೆಂಕಟಲಕ್ಷ್ಮಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts