ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಕ್ಕೆ ಸಹಕಾರ : ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ

New Project (53)
Published on

ಮೂಲ್ಕಿ: ಗ್ರಾಮೀಣ ಭಾಗದ ದೀನವರ್ಗದ ಜನರನ್ನು ಗುರುತಿಸಿ ಶೈಕ್ಷಣಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಹಾಯ ಸಹಕಾರವನ್ನು ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುತ್ತಿರುವ ಮೂಲ್ಕಿ ಅರಮನೆ ಟ್ರಸ್ಟ್ ಕಾರ್ಯ ಅಭಿನಂದನೀಯ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಮೂಲ್ಕಿ ಸೀಮೆ ಅರಮನೆ ಧರ್ಮ ಚಾವಡಿಯಲ್ಲಿ ಮೂಲ್ಕಿ ಅರಮನೆ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸವಲತ್ತು ವಿತರಿಸಲಾಯಿತು.

ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ಶಾಸಕ ಉಮಾನಾಥ ಎ.ಕೋಟ್ಯಾನ್ ಮಾತನಾಡಿದರು. ಕಟೀಲು ಕ್ಷೇತ್ರದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಚಿತ್ರನಟ ಮಂಡ್ಯ ರಮೇಶ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಡಾ.ಕಾರ್ತಿಕ್ ರಾವ್, ಉದ್ಯಮಿ ಮರ್ಸಿ ವೀಣಾ ಡಿಸೋಜ, ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು. ವಿನೋದ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಮಹಿಮ್ ಹೆಗ್ಡೆ ವಂದಿಸಿದರು.

ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು. ಜೀವನದಲ್ಲಿ ಸಂಸ್ಕೃತಿ ಸಂಸ್ಕಾರಗಳ ತಿಳಿವಳಿಕೆ ಹೊಂದಿ ಪರೋಪಕಾರ ಗುಣಗಳನ್ನು ಮೈಗೂಡಿಸಿಕೊಂಡರೆ ಸಹಾಯ ಸಹಕಾರ ಸಾರ್ಥಕವಾಗುತ್ತದೆ. ಉಮಾನಾಥ ಎ.ಕೋಟ್ಯಾನ್, ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net