

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ‌್ಯಾಂಕ್ ಪಡೆದ ಅನನ್ಯಾ ಕಾಮತ್, ಹತ್ತನೇ ರ‌್ಯಾಂಕ್ ಪಡೆದ ಶ್ರೀರಮ್ಯಾ ಪೈ., ಜೆಇಇಯಲ್ಲಿ ಉತ್ತಮ ಸಾಧನೆ ವಾಡಿದ ಆಶ್ಲೇಷ್ ಶೆಟ್ಟಿ, ಕೆಸಿಇಟಿ, ಸಿಎಸ್‌ಇಇಟಿಯಲ್ಲಿ ಸಾಧನೆ ವಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಮುಖ್ಯ ಅತಿಥಿ ರಾಜೇಂದ್ರ ಭಟ್, ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಸತೀಶ್ ಪೈ, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ಯೋಗೀಶ್ ಭಟ್, ಭಾಸ್ಕರ್ ಜೋಯಿಸ್, ಸುಧೀರ್ ನಾಯಕ್, ವಿಷ್ಣುಮೂರ್ತಿ ನಾಯಕ್, ಲಕ್ಷ್ಮಣ್ ಭಟ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಪ್ರಕಾಶ್ ಜೋಗಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ ಕುವಾರ್ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ವೀಣೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಕಲಾ ವಂದಿಸಿದರು.