More

    ದೇವಸ್ಥಾನಗಳ ಕೇಸರೀಕರಣಕ್ಕೆ ನಿರ್ಧಾರ; ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಆಕ್ರೋಶ


    ಹೂವಿನಹಡಗಲಿ: ರಾಜ್ಯ ಸರ್ಕಾರದ ವಶದಲ್ಲಿರುವ ದೇವಸ್ಥಾನಗಳನ್ನು ಮುಕ್ತಿಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.

    ತಾಲೂಕಿನ ಕತ್ತೆಬೆನ್ನೂರು ಗ್ರಾಮದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಸ್ವಾಮ್ಯದಲ್ಲಿರುವ ದೇವಸ್ಥಾನಗಳು ಈವರೆಗೆ ಶಾಸ್ತ್ರೋಕ್ರವಾಗಿ ಪೂಜಾ ವಿಧಿ ವಿಧಾನಗಳನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ, ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತ ಮಾಡಿ ಪರೋಕ್ಷವಾಗಿ ಆರ್‌ಎಸ್‌ಎಸ್ ಸುಪದ್ರಿಗೆ ಕೊಡಲು ತೀರ್ಮಾನಿಸಿದ್ದಾರೆ. ದೇವಸ್ಥಾನಗಳನ್ನು ಕೇಸರೀಕರಣ ಮಾಡಲು ಹೋಗುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ನಿಂದ ವಿರೋಧ ಇದೆ ಎಂದರು.

    ಮೇಕೆದಾಟು ಯೋಜನೆ ಕಾಮಗಾರಿಯನ್ನು ಕೂಡಲೇ ಸರ್ಕಾರ ಪ್ರಾರಂಭಿಸಬೇಕು. ವಿನಾಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಳಂಬಮಾಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಪರ ಕಾಳಜಿ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕತ್ತೆಬೆನ್ನೂರು ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡ ಉದ್ಘಾಟನೆ ಮಾಡಿದರು. ಪಟ್ಟಣದ ಕಾಯಕನಗರದಲ್ಲಿ 3.36 ಕೋಟಿ ವೆಚ್ಚದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ವಾರದಗೌಸ್ ಮೊಹಿದ್ದೀನ್, ಪುರಸಭೆ ಸದಸ್ಯ ಸೊಪ್ಪಿನ ಮಂಜುನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಪರಮೇಶ್ವರಪ್ಪ, ವಕೀಲ ಅಟವಾಳಗಿ ಕೊಟ್ರೇಶ, ಬಿಸಿಎಂ ಅಧಿಕಾರಿ ಎಂಪಿಎಂ ಅಶೋಕ, ಈಟಿ ಮಹಾಂತೇಶ, ಗುತ್ತಿಗೆದಾರ ಬೂದನೂರು ಮಂಜುನಾಥ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts