More

    ಯೋಜನೆ ಘೋಷಣೆ ಮಾಡದ ಸಿಎಂ: ಹೊರಗುತ್ತಿಗೆ ನೌಕರರ ಪ್ರತಿಭಟನೆ

    ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ನೇರ ಪಾವತಿ ಪದ್ಧತಿಯನ್ನು ರಾಜ್ಯ ಬಜೆಟ್ ಘೋಷಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
    ನಗರಸಭೆ ಕಚೇರಿ ಮುಂಭಾಗ ಜಮಾಯಿಸಿದ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೌರಾಯುಕ್ತ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
    ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸದೆ ಸರ್ಕಾರ ನಿರಾಸೆ ಮೂಡಿಸಿದೆ. ಜುಲೈನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು, ಲೋರ‍್ಸ್, ಕ್ಲೀರ‍್ಸ್, ಹೆಲ್ರ‍್ಸ್, ಯೂಜಿಡಿ ಕಾರ್ಮಿಕರು ಡಾಟ ಆಪರೇಟರ್‌ಗಳು ಬೀದಿದೀಪ ನಿರ್ವಾಹಕರು, ಗಾರ್ಡನರುಗಳು, ಕಚೇರಿ ಸಹಾಯಕರು, ಸ್ಮಶಾನ ಕಾವಲುಗಾರರು ಸೇರಿದಂತೆ ಎಲ್ಲರನ್ನೂ ಪೌರ ಕಾರ್ಮಿಕರ ನೇರ ಪಾವತಿಗೆ ತರುವುದಾಗಿ ಸ್ವತಃ ಮುಖ್ಯಮಂತ್ರಿ ಘೋಷಿಸಿದ್ದರು. ಆದರೆ ಬಜೆಟ್‌ನಲ್ಲಿ ಘೋಷಣೆ ಮಾಡದೆ ದ್ರೋಹವೆಸಗಿದ್ದಾರೆ ಎಂದು ದೂರಿದರು.
    ನಗರಗಳ ಸ್ವಚ್ಛತೆ ಕುಡಿಯುವ ನೀರಿನ ಸಮರ್ಪಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹೊರಗುತ್ತಿಗೆ ನೌಕರರನ್ನು ಬಜೆಟ್‌ನಲ್ಲಿ ವಂಚಿಸಿದೆ. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ದುಡಿದ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ನೌಕರರಿಗೆ ಸರ್ಕಾರ ನೀಡುವ ಗೌರವ ಇದಾಗಿದೆ ಎಂದು ಆರೋಪಿಸಿದರು.
    ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸಲೇಬೇಕು ಎಂದು ಆಗ್ರಹಿಸಿ ಫೆ. ೨೨ರಂದು ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ಘೋಷಣೆಯೊಂದಿಗೆ ಮುಖ್ಯಮಂತ್ರಿಗಳ ಮನೆ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    ಮುಖಂಡರಾದ ಎಂ.ಬಿ. ನಾಗಣ್ಣಗೌಡ, ಮಣಿ, ಶಿವಕುಮಾರ, ಚನ್ನೇಶ, ವಿಜಯ್, ನದೀಮ್, ಹರೀಶ, ವಿಷ್ಣು, ಅನಿಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts