

HOROSCOPE 2025 : ನಾವೀಗ ವರ್ಷದ ಕೊನೆಯ ತಿಂಗಳಿಗೆ ಪ್ರವೇಶ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ 2024 ಮುಗಿದು 2025ರ ಹೊಸ ವರ್ಷ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ಅದೃಷ್ಟ ಬದಲಾಗುತ್ತಾ ಎಂದು ಯೋಚನೆ ಮಾಡುವವರು ಕೂಡ ಇದಾರೆ. ಅದಕ್ಕಾಗಿ ತಮ್ಮ ರಾಶಿಭವಿಷ್ಯ ತಿಳಿದುಕೊಳ್ಳಲು ತೀವ್ರ ಕುತೂಹಲವನ್ನು ಹೊಂದಿರುತ್ತಾರೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ವ್ಯಕ್ತಿಯು ಜನಿಸಿದ ರಾಶಿಚಕ್ರದ ಚಿಹ್ನೆಯ ಮೇಲೆ ಹೆಚ್ಚಾಗಿ ಪ್ರಭಾವ ಬೀರುತ್ತವೆ ಎಂದು ನಂಬಲಾಗಿದೆ. ಮುಂಬರುವ 2025ರಲ್ಲಿ ಪ್ರಮುಖ ಗ್ರಹಗಳು ರಾಶಿಚಕ್ರ ಚಿಹ್ನೆಗಳನ್ನು ಬದಲಾಯಿಸಲಿದ್ದು, ಈ ಬದಲಾವಣೆಯಿಂದ ಕೆಲವು ರಾಶಿಚಕ್ರ ಚಿಹ್ನೆಗಳ ಜೀವನದಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಿವೆ.
ಪಂಚಾಂಗದ ಪ್ರಕಾರ, ಮುಂಬರುವ 2025ರಲ್ಲಿ ಎರಡು ಗ್ರಹಗಳ ಸಂಯೋಗ ಸಂಭವಿಸುತ್ತದೆ. ಅದು ಕೂಡ ಎರಡು ಸ್ನೇಹಿ ಗ್ರಹಗಳು ಒಟ್ಟಿಗೆ ಪ್ರಯಾಣಿಸುತ್ತವೆ. ಈ ಸಂಯೋಜನೆಯು ಸುಮಾರು 30 ವರ್ಷಗಳ ನಂತರ ಸಂಭವಿಸುತ್ತಿದ್ದು, ಈ ಸಂಯೋಗವು ಕುಂಭರಾಶಿ ಚಿಹ್ನೆಯಲ್ಲಿ ನಡೆಯುತ್ತದೆ.
ಜ್ಯೋತಿಷ್ಯದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿಯು ತನ್ನ ತ್ರಿಕೋನ ಚಿಹ್ನೆಯಾದ ಕುಂಭರಾಶಿ ಮೂಲಕ ಸಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿ ಬುಧ ಗ್ರಹವನ್ನು ಸೇರಲಿದೆ. ಈ ಎರಡೂ ಗ್ರಹಗಳು ಸ್ನೇಹಪರ ಗ್ರಹಗಳಾಗಿರುವುದರಿಂದ, ಕೆಲವು ರಾಶಿಚಕ್ರ ಚಿಹ್ನೆಗಳು ಕೆಲಸ, ವ್ಯವಹಾರ ಮತ್ತು ಹಣಕಾಸಿನ ವಿಷಯಗಳಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಪಡೆಯುತ್ತವೆ. ಆ ರಾಶಿ ಯಾವುವು ಎಂಬುದನ್ನು ನಾವೀಗ ತಿಳಿಯೋಣ.
ಮೇಷ ರಾಶಿಯಲ್ಲಿ ಜನಿಸಿದ ಜನರು 2025ರಲ್ಲಿ ಶನಿ ಮತ್ತು ಬುಧ ಸಂಯೋಗದಿಂದ ಹೊಸ ಆದಾಯದ ಮೂಲಗಳೊಂದಿಗೆ ಬೆಳವಣಿಗೆ ಹೊಂದುತ್ತಾರೆ. ಅಲ್ಲದೆ, ವೈವಾಹಿಕ ಜೀವನವು ತುಂಬಾ ಸಂತೋಷದಿಂದ ಕೂಡಿರುತ್ತದೆ. ಷೇರು ಮಾರುಕಟ್ಟೆಗೆ ಸಂಬಂಧಿಸಿದವರು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹೂಡಿಕೆಯಿಂದ ಸಾಕಷ್ಟು ಲಾಭ ಪಡೆಯುವ ಸಾಧ್ಯತೆ ಇದೆ. ಅಲ್ಲದೆ ಮನೆಯಲ್ಲಿರುವ ಮಕ್ಕಳ ವಿದ್ಯಾಭ್ಯಾಸ ಮತ್ತು ವೃತ್ತಿಯಲ್ಲಿ ಉತ್ತಮ ಯಶಸ್ಸು ಸಿಗುವ ಸಾಧ್ಯತೆ ಇದೆ. ಇಡೀ ಜೀವನವು ಪ್ರಕಾಶಮಾನವಾಗಿರುತ್ತದೆ.
ಮಕರ ರಾಶಿಯಲ್ಲಿ ಜನಿಸಿದವರು ಶನಿ ಮತ್ತು ಬುಧ ಗ್ರಹಗಳ ಸಂಯೋಗದಿಂದ ಜೀವನದಲ್ಲಿ ಸಂತೋಷವನ್ನು ಅನುಭವಿಸುತ್ತಾರೆ. ಅವರ ಸಂಬಂಧಗಳು ಬಲಗೊಳ್ಳುತ್ತವೆ ಮತ್ತು ಜೀವನದಲ್ಲಿ ಪ್ರಗತಿಯನ್ನು ಕಾಣುತ್ತಾರೆ. ಬರವಣಿಗೆ ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರಿಗೆ ಈ ಅವಧಿಯು ತುಂಬಾ ಅನುಕೂಲಕರವಾಗಿರುತ್ತದೆ. ಬಹಳ ದಿನಗಳಿಂದ ಬರಬೇಕಿದ್ದ ಹಣ ಸಿಗುವ ಸಾಧ್ಯತೆ ಇದೆ. 2025ರಲ್ಲಿ ಶನಿದೇವನ ಆಶೀರ್ವಾದದಿಂದ ಇಲ್ಲಿಯವರೆಗೆ ಸ್ಥಗಿತಗೊಂಡಿದ್ದ ಎಲ್ಲ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ.
ಈ ರಾಶಿಯಲ್ಲಿ ಜನಿಸಿದವರು ಶನಿ ಮತ್ತು ಬುಧ ಸಂಯೋಗದಿಂದ 2025ರಲ್ಲಿ ಅದೃಷ್ಟವನ್ನು ಹೊಂದುತ್ತಾರೆ. ಕೆಲಸದಲ್ಲಿ ನಿಮಗೆ ಗೌರವ ಹೆಚ್ಚಾಗುತ್ತದೆ. ವ್ಯಾಪಾರಸ್ಥರು ಉತ್ತಮ ಲಾಭ ಗಳಿಸುವರು. ಮುಂದಿನ ವರ್ಷ ತಮ್ಮ ವೃತ್ತಿಜೀವನದಲ್ಲಿ ಉತ್ತಮ ಪ್ರಗತಿಯನ್ನು ಕಾಣುತ್ತಾರೆ. ಕೆಲವರಿಗೆ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ವಿವಾಹ ಪ್ರಯತ್ನಗಳು ಯಶಸ್ಸಿನಲ್ಲಿ ಕೊನೆಗೊಳ್ಳುತ್ತವೆ. ಶನಿ ಮತ್ತು ಬುಧ ಗ್ರಹಗಳ ಆಶೀರ್ವಾದದಿಂದ ಜೀವನದಲ್ಲಿ ಯಶಸ್ಸು ಮತ್ತು ಸಂಪತ್ತು ಸಂಗ್ರಹವಾಗುತ್ತದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್ ನೆಟ್ ಸೈಟ್ ಜವಾಬ್ದಾರರಾಗಿರುವುದಿಲ್ಲ.