ಫ್ಲೈಓವರ್​ ಮೇಲೆ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರು ಸ್ಥಳದಲ್ಲೇ ಸಾವು..

Accident
Published on

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರ ದೇಹಗಳು ಛಿದ್ರಗೊಂಡಿವೆ.

ಫ್ಲೈ ಓವರ್ ಮೇಲೆ ಓವರ್ ಟೇಕ್​ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಕ್ಕೂ ಅಪ್ಪಳಿಸಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಾರು ಕೂಡ ತೀರ ಜಖಂಗೊಂಡಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮೃತಪಟ್ಟವರ ಕುರಿತ ನಿಖರವಾದ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net