ಫ್ಲೈಓವರ್​ ಮೇಲೆ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರು ಸ್ಥಳದಲ್ಲೇ ಸಾವು..

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರ ದೇಹಗಳು ಛಿದ್ರಗೊಂಡಿವೆ. ಫ್ಲೈ ಓವರ್ ಮೇಲೆ ಓವರ್ ಟೇಕ್​ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಕ್ಕೂ ಅಪ್ಪಳಿಸಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಕೂಡ ತೀರ ಜಖಂಗೊಂಡಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. … Continue reading ಫ್ಲೈಓವರ್​ ಮೇಲೆ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರು ಸ್ಥಳದಲ್ಲೇ ಸಾವು..